ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಉಡುಪಿ: ಉಡುಪಿ ಕಟಪಾಡಿಯಲ್ಲಿ ಶನಿವಾರ ನಡೆದ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 18 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 20 ಜೊತೆ ನೇಗಿಲು ಕಿರಿಯ: 83 ಜೊತೆ ಒಟ್ಟು ಕೋಣಗಳ ಸಂಖ್ಯೆ: 165 ಜೊತೆ ಕನೆಹಲಗೆ:  (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) […]

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಬೀಚ್ ಕ್ಲೀನಪ್” ಅಭಿಯಾನ

ಮಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮೊಮ್ಸ್ ಅಪ್ ಮಂಗಳೂರು ಡೆಕತ್ಲಾನ್ ಹಾಗೂ ಪಣಂಬೂರು ಬೀಚ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ “ಬೀಚ್ ಕ್ಲೀನಪ್ ” ಅಭಿಯಾನ ಇಂದು ಮಂಗಳೂರಿನ ಪಣಂಬೂರು ಬೀಚ್ ಅಲ್ಲಿ ನಡೆಯಿತು. ಪಣಂಬೂರು ಬೀಚನಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಸುಮಾರು 60 ಮಂದಿ ಪಾಲ್ಗೊಂಡಿದ್ದರು. ಬೆಳಿಗ್ಗೆ 7.15 ಕ್ಕೆ ಆರಂಭವಾದ ಅಭಿಯಾನ ಸತತ 2 ತಾಸು ನಡೆದು ಹೆಚ್ಚಿನ ಪ್ರಮಾಣದಲ್ಲಿ ಗುಟ್ಕಾ ಪ್ಯಾಕೆಟ್, ಪ್ಲಾಸ್ಟಿಕ್ ಬಾಟಲಿ, ಬಿಯರ್ ಬಾಟಲಿ, ಐಸ್ ಕ್ರೀಮ್ ಕಪ್, ಸಿಗರೇಟ್, ಚಿಪ್ಸ್ […]

ಹೆಮ್ಮಾಡಿ ಬಳಿ ಟಿಪ್ಪರ್ – ದ್ವಿಚಕ್ರ ವಾಹನ ಡಿಕ್ಕಿ; ಮಹಿಳೆ ಮೃತ್ಯು, ಪತಿ ಮಗುವಿಗೆ ಗಾಯ

ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ಭಾನುವಾರ ನಡೆದಿದೆ. ಮೃತರನ್ನು ಅರೆಹೊಳೆ ಎರುಕೋಣೆ ಸಮೀಪದ ರಾಗಿಹಕ್ಲು ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದೆ. ಇವರ ಪತಿ ಶರತ್ ಹಾಗೂ ಮಗು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಹೆಮ್ಮಾಡಿ ಕಡೆಯಿಂದ ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಅತಿವೇಗದಿಂದ ಬಂದಿದ್ದು, ಅದೇ ದಾರಿಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ತನ್ನ ಜೊತೆಗೆ ಬೀಳುತ್ತಿದ್ದ ಮಗುವನ್ನು ಇನ್ನೊಂದು ಮಗ್ಗುಲಿಗೆ ಹಾಕಿ ಮಹಿಳೆ ಬೊಬ್ಬೆ ಹೊಡೆದರೂ ಕೇಳಿಸದೆ ಆಕೆಯ […]

ಸಹಾಯಧನ ಪಡೆಯಲು ಆಧಾರ್ ಜೋಡಣೆ ಕಡ್ಡಾಯ

ಉಡುಪಿ: ಮೀನುಗಾರಿಕೆ ಇಲಾಖೆಯಡಿ ಸಹಾಯಧನ ಪಡೆಯಲು ಇಚ್ಛಿಸುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿ ಮಾಡಬೇಕೆಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಈವರೆಗೆ ಆಧಾರ್ ಜೋಡಣೆಯಾಗದೆ ಸಹಾಯಧನ ಪಡೆಯಲು ಬಾಕಿ ಇರುವ ಮೀನುಗಾರಿಕ ಸಂಘದ ಸದಸ್ಯರು ಸಹಕಾರ ಸಂಘದ ಕಛೇರಿಗೆ ತಮ್ಮ ಆಧಾರ್‌ನ ಕಾರ್ಡ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ಮಾರ್ಚ್ 15 ರ ಅಪರಾಹ್ನ 2 ಗಂಟೆಗೆ ಭೇಟಿ ನೀಡಿ ಸೇವೆಯನ್ನು ಪಡೆದುಕೊಳ್ಳುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಶಿಶು ಪಾಲನಾ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸರ್ಕಾರಿ ಕಚೇರಿಗಳಲ್ಲಿನ ಉದೋಗಸ್ಥ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಜಿಲ್ಲೆಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಮಾನಸಿಕ ಸಮಸ್ಯೆಗಳಿಗೆ ಸ್ಪಂಧಿಸಿ ಅವರ ಅಗತ್ಯಗಳಿಗೆ ಅನುಗುಣವಾಗಿ ಪರಿಹಾರ ಕೈಗೊಂಡು, ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವಂತಹ ಸ್ವಯಂ ಸೇವಾ ಸಂಸ್ಥೆಗಳು ಮಾರ್ಚ್ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ […]