ರೆಡ್ ಕ್ರಾಸ್ ಸಂಸ್ಥೆ ಶತಮಾನೋತ್ಸವ ಅಂಗವಾಗಿ ಉಚಿತ ಕ್ಯಾನ್ಸರ್ ತಪಾಸಣಾ ಮತ್ತು ಮಾಹಿತಿ ಶಿಬಿರ ಕಾರ್ಯಕ್ರಮ

ಉಡುಪಿ, ಮಾ.14: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆ ಮತ್ತು ಎಸ್. ಯುವ ರೆಡ್ ಕ್ರಾಸ್ ಘಟಕ ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರದ ಸಹಾಯೋಗದೊಂದಿಗೆ ಇತ್ತೀಚೆಗೆ ರೆಡ್ ಕ್ರಾಸ್ ಸಂಸ್ಥೆ ಶತಮಾನೋತ್ಸವ ಅಂಗವಾಗಿ ಉಚಿತ ಕ್ಯಾನ್ಸರ್ ತಪಾಸಣಾ ಮತ್ತು ಮಾಹಿತಿ ಶಿಬಿರ ಕಾರ್ಯಕ್ರಮವು ಬ್ರಹ್ಮಾವರ ಎಸ್.ಎಮ್.ಎಸ್ ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಪೋಷಕ ಸದಸ್ಯರು, ನುರಿತ ಪ್ರಥಮ ಚಿಕಿತ್ಸಾ ತರಬೇತುದಾರ ಹಾಗೂ ಎಲುಬು […]

ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭ

ಉಡುಪಿ, ಮಾ.14: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭವು ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾ.14ರಿಂದ 20ರ ವರೆಗೆ “ಹರ್ಷೋತ್ಸವ” ಸಂಭ್ರಮಾಚರಣೆ

ಉಡುಪಿ: ಗ್ರಾಹಕರ ನೆಚ್ಚಿನ ಶಾಪಿಂಗ್ ಹಬ್ಬ “ಹರ್ಷೋತ್ಸವ” ಈ ಬಾರಿ ಇನ್ನಷ್ಟು ವೈಶಿಷ್ಟ್ಯಗಳೊಂದಿಗೆ ಮಾ.14 ರಿಂದ 20ರ ವರೆಗೆ ನಡೆಯಲಿದೆ. ಉಡುಪಿಯ 3, ಮಂಗಳೂರಿನ 2, ಬ್ರಹ್ಮಾವರ, ಸುರತ್ಕಲ್, ಪುತ್ತೂರು, ಕುಂದಾಪುರ, ಶಿವಮೊಗ್ಗ ಮಳಿಗೆಗಳಲ್ಲಿ ಗ್ರಾಹಕರ ಶಾಪಿಂಗ್ ಹಬ್ಬ ಹರ್ಷೋತ್ಸವ ಸಂಭ್ರಮದಿಂದ ಜರುಗಲಿದೆ‌. ಜಗತ್ಪ್ರಸಿದ್ಧ ಬ್ರ್ಯಾಂಡ್ ಗಳಾದ ಗೋದ್ರೇಜ್, ಒನಿಡಾ, ವೋಲ್ಟಾಸ್, ಐಎಫ್ ಬಿ , ವಲ್ಸಪೂಲ್ , ಸೋನಿ, ಪ್ಯಾನಸೋನಿಕ್, ಎಲ್ ಜಿ, ಸ್ಯಾಮ್ ಸಂಗ್, ಬೋಶ್, ಹೈಯರ್, ಲೀಭೇರ್, ಬ್ಲೂ ಸ್ಟಾರ್, ಆಪಲ್, ಎಚ್ […]

ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಿರ್ಣಯ ಮಂಡನೆ: ಕುಯಿಲಾಡಿ

ಉಡುಪಿ: ದೇಶದಲ್ಲಿ ನಡೆಯುತ್ತಿರುವ ಪ್ರಸ್ತುತ ವಿದ್ಯಮಾನಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಅನಪೇಕ್ಷಿತ ಘಟನೆಗಳ ಈ ಪರಿಪಕ್ವ ಕಾಲದಲ್ಲಿ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಾ.13ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ […]

ಕಾರ್ಕಳ ಉತ್ಸವ: ಗಾಂಧಿ ಮೈದಾನದಲ್ಲಿ ನಗಾರಿ ಬಾರಿಸಿ ಕಾರ್ಯಕ್ರಮ ಉದ್ಘಾಟನೆ

ಕಾರ್ಕಳ: ಅಭಿವೃದ್ದಿ ದೃಷ್ಠಿಯಲ್ಲಿ ಅನೇಕ ಕಲ್ಪನೆ ಇರಿಸಿಕೊಂಡಿರುವ ಸಚಿವರು ಕಾರ್ಕಳಕ್ಕೆ ಅನುದಾನ ತರಿಸಿಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ ಇದಕ್ಕೆ ಇಚ್ಚಾಶಕ್ತಿ ಬೇಕು ಹೊರತು ಅಪನಂಬಿಕೆಯಲ್ಲ. ಅಭಿವೃದ್ಧಿ ದೃಷ್ಟಿಯಲ್ಲಿ ರಾಜಕೀಯವಿಲ್ಲ, ಗ್ರಾಮೀಣ ಭಾಗಗಳ ಸಂಸ್ಕೃತಿಯನ್ನು ಚಿಗುರಿಸುವಂತಾಗಬೇಕು ದಾಖಲೀಕರಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದರು. ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆದ ಕಾರ್ಕಳ ಉತ್ಸವ ನಗಾರಿ ಬಾರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ ಸಾಧನೆಗಳು ನಿಂತ ನೀರಾಗಬಾರದು ಅದನ್ನು ಮೀಳಿಗೆಯಿಂದ […]