ಸಗ್ರಿ ನಾಗಮಂಡಲೋತ್ಸವ: ಪೂರ್ವಭಾವಿ ಸಭೆ
ಉಡುಪಿ: ಇಲ್ಲಿನ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8 ರಿಂದ 11 ನೇ ತಾರೀಖಿನ ವರೆಗೆ ನಡೆಯಲಿರುವ ನವನಿರ್ಮಿತ ಶಿಲಾಮಯ ನಾಗದೇವರ ಗುಡಿ ಸಮರ್ಪಣೆ, ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಸಮಾಲೋಚನಾ ಸಭೆ ಭಾನುವಾರ ಶ್ರೀ ಕ್ಷೇತ್ರದ ಅನಂತ ಸಭಾಭವನದಲ್ಲಿ ನಡೆಯಿತು. ಶ್ರೀ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಪ್ರಸಿದ್ಧ ವೈದ್ಯ ಡಾ. ರವಿರಾಜ ಆಚಾರ್ಯರು ಉದ್ಘಾಟಿಸಿ ಉತ್ಸವಕ್ಕೆ ಎಲ್ಲ ರೀತಿಯ ಸಹಕಾರದ ಭರವಸೆ ಇತ್ತರು. ಉದ್ಯಮಿ […]
ಉಡುಪಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ಉಡುಪಿ: ಬಾವಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಉದ್ಯಾವರ ಬಲಾಯಿಪಾದೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು 30 ವರ್ಷದ ಸಚಿನ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು, ಬಾವಿಗಿಳಿದು ಮೃತದೇಹ ಮೇಲೆತ್ತಿದರು. ಇವರಿಗೆ ಸ್ಥಳೀಯರು ಸಹಕಾರ ನೀಡಿದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.