ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಎಲ್ಲರಿಗೂ ಮಾದರಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾ.15: ಕೋವಿಡ್ ಸೇರಿದಂತೆ ಇತರೆ ತುರ್ತು ಸಂದರ್ಭಗಳಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತದೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅವರ ಕಾರ್ಯ ಇತರೆ ಎಲ್ಲರಿಗೂ ಮಾದರಿ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು. ಅವರು ಇಂದು ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕೋವಿಡ್ ಸೋಂಕಿನ ಮೂರು ಅಲೆಗಳ ಸಂದರ್ಭದಲ್ಲಿಯೂ […]

ಮಾ.16 ರಂದು 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಚಾಲನೆ

ಉಡುಪಿ, ಮಾ.15: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ (2008, 2009 ಮತ್ತು 2010 ರಲ್ಲಿ ಮಾರ್ಚ್ 15 ರ ಒಳಗೆ ಜನಿಸಿದ ಮಕ್ಕಳು) ಕೋವಿಡ್-19 ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯು ಮಾರ್ಚ್ 16 ರಂದು ಬೆಳಗ್ಗೆ 11 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ ಜಿಲ್ಲೆಯಲ್ಲಿ ಮಾ.21ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ: ಜಿಲ್ಲಾಧಿಕಾರಿ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಮಾರ್ಚ್ 21 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಶಾಲಾ, ಕಾಲೇಜು ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಸಮವಸ್ತ್ರ […]

ಆರಂಭಿಕ ಹಂತದಲ್ಲಿ ಗುರುತಿಸಿ, ಚಿಕಿತ್ಸೆ ಪಡೆದರೆ ಕ್ಯಾನ್ಸರ್ ರೋಗದಿಂದ ಮುಕ್ತಿ ಹೊಂದಲು ಸಾಧ್ಯ: ಅಶೋಕ್ ಕುಮಾರ್ ವೈ.ಜಿ

ಉಡುಪಿ, ಮಾ.15: ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ, ಚಿಕಿತ್ಸೆ ಪಡೆಯುವುದರಿಂದ ರೋಗದಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಉಪಸಭಾಪತಿ ಅಶೋಕ್ ಕುಮಾರ್ ವೈ.ಜಿ ತಿಳಿಸಿದರು. ಅವರು ಸೋಮವಾರ, ಉಡುಪಿಯ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯು.ಜಿ.ಎ.ವಿ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಯುವ ರೆಡ್‌ಕ್ರಾಸ್ ಘಟಕ ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಡುಪಿ ಇವರ ಸಂಯುಕ್ತ […]

ಹೈಕೋರ್ಟ್ ಐತಿಹಾಸಿಕ ತೀರ್ಪು ಕಾನೂನು ಬದ್ಧ ಹೋರಾಟಕ್ಕೆ ಸಂದ ಜಯ, ಮತಾಂಧ ಶಕ್ತಿಗಳ ವಿರುದ್ಧ ಹೋರಾಟ ನಿರಂತರ: ಯಶ್ ಪಾಲ್ ಸುವರ್ಣ

ಉಡುಪಿ: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ‌ಹಿಡಿದಿದೆ. ಇದು ರಾಜ್ಯದ ವಿದ್ಯಾರ್ಥಿಗಳ ಸುವ್ಯವಸ್ಥಿತ ಶಿಕ್ಷಣಕ್ಕಾಗಿ ನಡೆಸಿದ ಕಾನೂನು ಬದ್ಧ ಹೋರಾಟಕ್ಕೆ ಸಂದ ಜಯವಾಗಿದ್ದು, ಹಿಜಾಬ್ ವಿವಾದದ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ ಮತಾಂಧ ಶಕ್ತಿಗಳ ವಿರುದ್ಧ ಹೋರಾಟ ನಿರಂತರವಾಗಿರಲಿದೆ ಎಂದು ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಮಂದಿ ವಿದ್ಯಾರ್ಥಿನಿಯರು ಮತಾಂಧ ದೇಶದ್ರೋಹಿ ಸಂಘಟನೆಗಳ ಕುಮ್ಮಕ್ಕಿನಿಂದ […]