ಕಾರ್ಕಳ ಉತ್ಸವ: ಅರಣ್ಯ ಪ್ರಾತ್ಯಕ್ಷಿಕೆ ಹಾಗೂ ವಸ್ತು ಪ್ರದರ್ಶನ ಮಳಿಗೆ ಹಾಗೂ ಮಾರಾಟ ಮಳಿಗೆ ಉದ್ಘಾಟನೆ

ಕಾರ್ಕಳ: ಕರ್ನಾಟಕ ಏಕೀಕರಣದ ಹೊರಾಟದಲ್ಲಿ ಕಾರ್ಕಳದ ಜಿನರಾಜ ಹೆಗ್ಡೆಯವರು ಪ್ರಮುಖ ಪಾತ್ರ ವಹಿಸಿದರು. ಅವರ ಸ್ಮರಣಿಯೊಂದಿಗೆ ಹೊಸ ಪೀಳಿಗೆಗೆ ಅವರ ಕೊಡುಗೆಯನ್ನು ಸ್ಮರಿಸುವ ಉದ್ದೇಶದೊಂದಿಗೆ ಅವರ ಹೆಸರನ್ನು ಕಾರ್ಕಳ ಉತ್ಸವದ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಯ ವೇದಿಕೆಗೆ ಇಡಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ.ಸುನೀಲ್‌ ಕುಮಾರ್ ಹೇಳಿದರು. ಕಾರ್ಕಳ ಉತ್ಸವ ಪ್ರಯುಕ್ತ ಅರಣ್ಯ ಪ್ರಾತ್ಯಕ್ಷಿಕೆ ಹಾಗೂ ವಸ್ತುಪ್ರದರ್ಶನ ಮಳಿಗೆ ಹಾಗೂ ಮಾರಾಟ ಮಳಿಗೆ ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ […]

ಮಾ.17,18: ಜಿಲ್ಲೆಯಲ್ಲಿ ಗೋವಾ ರಾಜ್ಯಪಾಲರ ಪ್ರವಾಸ

ಉಡುಪಿ: ಗೌರವಾನ್ವಿತ ಗೋವಾ ರಾಜ್ಯಪಾಲರಾದ ಪಿ.ಎಸ್ ಶ್ರೀಧರನ್ ಪಿಳ್ಳೈ ಅವರು ಮಾರ್ಚ್ 17 ಮತ್ತು 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.17 ರಂದು ರಾತ್ರಿ ಜಿಲ್ಲೆಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಮಾ.18 ರಂದು ಬೆಳಗ್ಗೆ 7.35 ಕ್ಕೆ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ನಂತರ ಮಂಗಳೂರಿಗೆ ತೆರಳಲಿರುವರು.

ಯಶಸ್ವಿಯಾಗಿ ಅವಧಿ ಪೂರೈಸಿದ ಶ್ಯಾಮಲಾ ಕುಂದರ್

ಉಡುಪಿ: ಉಡುಪಿ ಜಿಲ್ಲೆಯ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಮೂರು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಉಡುಪಿಯಲ್ಲಿ ಕಾರ್ಯಕರ್ತೆಯಾಗಿದ್ದ ಶ್ಯಾಮಲಾ ಕುಂದರ್ ಅವರಿಗೆ ಬಿಜೆಪಿ ಪಕ್ಷ ಹಾಗು ಹಿರಿಯ ನಾಯಕರು ಮಹಿಳಾ ಆಯೋಗದ ಸದಸ್ಯೆಯಾಗಿ ಜವಾಬ್ದಾರಿ ನಿರ್ವಹಿಸಲುಅವಕಾಶವನ್ನು ಮಾಡಿಕೊಟ್ಟಿದ್ದು, ಅವರಿಗೆಲ್ಲಾ ಧನ್ಯವಾದವನ್ನು ಶ್ಯಾಮಲಾ ಕುಂದರ್ ತಿಳಿಸಿದ್ದಾರೆ ಮಹಿಳಾ ಆಯೋಗದ ಸದಸ್ಯೆಯಾಗಿ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ದಿಲ್ಲಿಯ ಪಾರ್ಲಿಮೆಂಟ್ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಭೇಟಿ ಮಾಡಿ ಧನ್ಯವಾದ […]

ಲಸಿಕೆ ನೀಡುವುದರಿಂದ ಮಕ್ಕಳಿಗೆ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಕೋವಿಡ್- 19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಇಂದಿನಿಂದ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಉಚಿತವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು, ಇದನ್ನು ಮುಂಜಾಗ್ರತೆಯಾಗಿ ಎಲ್ಲಾ ರೀತಿಯಲ್ಲಿ ಪರೀಕ್ಷೆಗಳಿಗೆ ಒಳಪಡಿಸಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಖಾತ್ರಿಯಾಗಿರುವುದರಿಂದ, ಜಿಲ್ಲೆಯ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆ ಕೊಡಿಸುವ ಮೂಲಕ ಮಕ್ಕಳನ್ನು ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ ಒದಗಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡುವಿನ […]

ಸಗ್ರಿಯ ವಾಸುಕಿ ದೇಗುಲದ ನಾಗಮಂಡಲೋತ್ಸವದ ಪೂರ್ವಬಾವಿ ಚಪ್ಪರ ಮುಹೂರ್ತ

ಉಡುಪಿಯ ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಪ್ರಿಲ್ 8ರಿಂದ ನಡೆಯಲಿರುವ ನವನಿರ್ಮಿತ ಶಿಲಾಮಯ ನಾಗದೇವರ ಗುಡಿ ಸಮರ್ಪಣೆ, ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವಕ್ಕೆ ಭೂಮಿ ಪೂಜಾ ಪೂರ್ವಕ ಚಪ್ಪರ ಮುಹೂರ್ತವು ಬುಧವಾರ ನೆರವೇರಿತು. ಪ್ರೇಮಚಂದ್ರ ಐತಾಳ್ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯಿತು. ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಎನ್. ಪ್ರಸನ್ನಕುಮಾರ್ ರಾವ್, ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ನಿಟ್ಟೂರು ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ಗಿರಿಧರ ಆಚಾರ್ಯ, ಗೀತಾ ಶೇಟ್, ಮುಖ್ಯ ಅತಿಥಿಗಳಾಗಿ […]