ಗ್ರಾಹಕರು ತಮ್ಮ ಹಕ್ಕಿನ ಬಗ್ಗೆ ಅರಿವನ್ನು ಹೊಂದಿದಾಗ ತಮಗಾದ ಅನ್ಯಾಯದ ಬಗ್ಗೆ ಪ್ರಶ್ನಿಸಲು ಸಾಧ್ಯ: ನ್ಯಾ. ಶರ್ಮಿಳಾ ಎಸ್
ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಅಥವಾ ಸೇವೆಗಳನ್ನು ಪಡೆಯುವಾಗ ತಮಗಾಗುವ ಶೋಷಣೆಯನ್ನು ಪ್ರಶ್ನಿಸಲು, ಗ್ರಾಹಕರ ಹಿತರಕ್ಷಣೆಗೆ ಇರುವ ಕಾನೂನುಗಳನ್ನು ತಿಳಿದುಕೊಂಡಾಗ ಮಾತ್ರ ಸಾಧ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ತಿಳಿಸಿದರು. ಅವರು ಇಂದು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಮಾಹಿತಿ ಕೇಂದ್ರ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ […]