ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಉಡುಪಿ: ಹಿಜಾಬ್ ಗೂ ಶಿಕ್ಷಣಕ್ಕೂ ಹೊಂದಾಣಿಕೆ ಸಲ್ಲದು. ಉಚ್ಚ ನ್ಯಾಯಾಲಯ ಹಿಜಾಬ್ ಪ್ರಕರಣದಲ್ಲಿ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಉತ್ತಮ ಮೌಲ್ಯಾಧಾರಿತ ತೀರ್ಪು ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ. ಶಿಕ್ಷಣವು ವಿದ್ಯಾರ್ಥಿಗಳ ಜೀವನದ ದಾರಿದೀಪ. ತಮ್ಮ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ಒಂದು ಸುಗಮ ಮಾರ್ಗ. ಸಂವಿಧಾನಾತ್ಮಕ, ದೇಶದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರತೀಕವಾಗಿರುವ ಶಿಕ್ಷಣವನ್ನು ವಿದ್ಯಾರ್ಥಿ ಸಮುದಾಯ ಹಾಗೂ ದೇಶವಾಸಿಗಳು ಅತೀ ಧನ್ಯತೆಯಿಂದ ಗೌರವಿಸಬೇಕಾಗಿದೆ. ಹಿಜಾಬ್ ಪ್ರಕರಣ ಉಡುಪಿಯಲ್ಲಿ […]

ಎಲ್ಲಾ ಧರ್ಮಕ್ಕಿಂತ ದೇಶದ ಸಂವಿಧಾನವೇ ದೊಡ್ಡದು, ಉಚ್ಚ ನ್ಯಾಯಾಲಯದ ತೀರ್ಪು ಸಂವಿಧಾನ ಬದ್ಧವಾಗಿದೆ: ರಾಕೇಶ್ ಬಿರ್ತಿ

ಉಡುಪಿ: ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ತಾರತಮ್ಯವನ್ನು ಹೋಗಲಾಡಿಸಿ ದೇಶದ ಸಂವಿಧಾನದ ಆಶಯದಂತೆ ಸಮಾನತೆಯ ಪ್ರತೀಕವಾದ “ಸಮವಸ್ತ್ರ” ಸಂಹಿತೆಯನ್ನು ಎತ್ತಿ ಹಿಡಿಯುವ ಮೂಲಕ ಹಿಜಬ್ ಮೂಭೂತ ಹಕ್ಕು ಎಂದು ಸಾಬೀತು ಆಗದ ಕಾರಣ ಗೌರವಾನ್ವಿತ ಉಚ್ಚನ್ಯಾಯಾಲಯವು ಈ ಮಹತ್ವದ ತೀರ್ಪನ್ನು ನೀಡಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಹೇಳಿದ್ದಾರೆ. ಯಾವ ಧರ್ಮವೂ ದೇಶದ ಸಂವಿಧಾನಕ್ಕಿಂತ ದೊಡ್ಡದಲ್ಲ ಎನ್ನುವುದು ತೀರ್ಪಿನ ಸಾರಾಂಶ. ನ್ಯಾಯಾಲಯದ ತೀರ್ಪಿಗೆ ತಲೆಬಾಗಲೇಬೇಕು ಎಂದಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗೆ ಸಂದರ್ಶನ ಪುನರಾರಂಭ

ಉಡುಪಿ: ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳಿಗೆ ಮಾರ್ಚ್ 21 ರಿಂದ ಕೋವಿಡ್ ಮಾರ್ಗಸೂಚಿಯನ್ವಯ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದ್ದು, ನಿಗಧಿತ ಸಂದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಬಂದಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿ ಕಾರಾಗೃಹದ ಅಧೀಕ್ಷಕರ ಕಚೇರಿಯ ದೂರವಾಣಿ ಸಂಖ್ಯೆ: 0820-2504101, ಮೊ.ನಂ: 9480806462 ಹಾಗೂ ಇ-ಮೇಲ್ dpudp.prisons-kar@gov.in ಅನ್ನು ಸಂಪರ್ಕಿಸಿ, ವಿವರಗಳೊಂದಿಗೆ ಸಂದರ್ಶನಕ್ಕೆ ನೋಂದಾಯಿಸಿ, ನಿಗದಪಡಿಸಿದ ದಿನ ಮತ್ತು ಸಮಯಕ್ಕೆ ಸಂದರ್ಶನಕ್ಕೆ ಆಗಮಿಸಬಹುದಾಗಿದೆ ಎಂದು ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಯ […]

ಡಾ.ಬಾಬು ಜಗಜೀವನ ರಾಂ, ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗೆ ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ಮೇಲ್ಕಂಡ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಮಾರ್ಚ್ 18 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ […]

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಎನ್ ಅಧಿಕಾರ ಸ್ವೀಕಾರ

ಉಡುಪಿ: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ವೀಣಾ.ಎನ್. ಅವರನ್ನು ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದೆ. ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.