ಉಡುಪಿ: ಬಾಲಕಿ ನಾಪತ್ತೆ
ಉಡುಪಿ: ನಗರದ ಹನುಮಂತನಗರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ನಿಟ್ಟೂರು ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ವಾಸವಿದ್ದ ಚೈತ್ರಾ ಆಲಿಯಾಸ್ ಸುಚಿತ್ರಾ (17) ಎಂಬ ಯುವತಿಯು 2019 ಮೇ 17 ರಿಂದ ನಾಪತ್ತೆಯಾಗಿರುತ್ತಾರೆ. 166 ಸೆಂ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ ಕೊರಂಗ್ರಪಾಡಿ: ಮಹಿಳೆ ನಾಪತ್ತೆ
ಉಡುಪಿ: ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ (27) ಎಂಬ ಮಹಿಳೆಯು ಮಾರ್ಚ್ 10 ರಂದು ಬೆಳಗ್ಗೆ 11.30 ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ […]
ನಗರದ ಪೇಜಾವರ ಮಠಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಭೇಟಿ
ಉಡುಪಿ ಪೇಜಾವರ ಮಠಕ್ಕೆ ಇಂದು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರು ಭೇಟಿ ನೀಡಿದರು. ರಾಜ್ಯಪಾಲರನ್ನು ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಹಾಗೂ ಶ್ರೀಗಳ ಶಾಸ್ತ್ರ ವಿದ್ಯಾರ್ಥಿಗಳು ಮಂತ್ರಘೋಷ ಸಹಿತ ಬರಮಾಡಿಕೊಂಡರು. ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪವಿತ್ರ ಪಾದುಕೆಗಳಿಗೆ ಪುಷ್ಪ ಅರ್ಪಿಸಿದ ಬಳಿಕ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೆಲಹೊತ್ತು ಸಮಾಲೋಚನೆ ನಡೆಸಿದರು. ಶ್ರೀಗಳು ರಾಜ್ಯಪಾಲರನ್ನು ಶಾಲು ಸ್ಮರಣಿಕೆ ದೇವರ ಗಂಧಪ್ರಸಾದ ಹಾಗೂ ಫಲ ಮಂತ್ರಾಕ್ಷತೆ ನೀಡಿ […]
ಕಬ್ಯಾಡಿ: ಮನೆ ವಿಚಾರದಲ್ಲಿ ಗಲಾಟೆ; ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಂದ ತಮ್ಮ.!
ಮಣಿಪಾಲ: ಮನೆಯ ವಾಸ್ತವ್ಯದ ವಿಚಾರದಲ್ಲಿ ಗಲಾಟೆ ನಡೆದು ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ್ ಕೊಲೆಯಾದ ವ್ಯಕ್ತಿ. ಮಾ.16ರಂದು ಸಂಜೆ 6.30ಕ್ಕೆ ಬಾಲಕೃಷ್ಣ ಹಾಗೂ ಅವರ ಸಹೋದರ ದಯಾನಂದ ಎಂಬಾತನಿಗೆ ಮನೆಯ ವಾಸ್ತವ್ಯದ ವಿಚಾರದಲ್ಲಿ ಗಲಾಟೆಯಾಗಿದೆ. ಇದೇ ದ್ವೇಷದಿಂದ ದಯಾನಂದ ಮನೆಯಲ್ಲಿದ್ದ ಕತ್ತಿಯಿಂದ ಬಾಲಕೃಷ್ಣ ಅವರ ತಲೆಗೆ ಹಲ್ಲೆ ಮಾಡಿದ್ದಾನೆ. ಇದರಿಂದ […]
ಭಾರತೀಯ ಸದ್ಚಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ
ಉಡುಪಿ: ನೆರೆಯ ಕೇರಳದವನಾಗಿದ್ದರೂ ಉಡುಪಿ ಭೇಟಿಯ ಕನಸು ಬಹಳ ತಡವಾಗಿ ನನಸಾಗುತ್ತಿದೆ. ಕಳೆದ ಹಲವು ಶತಮಾನಗಳಿಂದ ಭಾರತೀಯ ಸನಾತನ ಸದ್ವಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರವಾದುದು. ಇವತ್ತು ಶ್ರೀ ಕೃಷ್ಣನ ದರ್ಶನ ಹಾಗೂ ಸ್ವಾಮೀಜಿಯವರ ದರ್ಶನದಿಂದ ಅತ್ಯಂತ ಸಂತೋಷಗೊಂಡಿದ್ದೇನೆ. ಈ ಹಿಂದೆ 1978 ರಲ್ಲಿ ಕೇರಳದಲ್ಲಿ ಸನಾತನ ಧರ್ಮರಕ್ಷಣೆಯ ಸಲುವಾಗಿ ಬೃಹತ್ ಸಂತ ಸಮಾವೇಶ ಮತ್ತು ಹಿಂದು ಸಂಗಮ ನಡೆದಾಗ ಶ್ರೀ ವಿಶ್ವೇಶತೀರ್ಥ ಶ್ರೀಪಾದರೇ ನೇತೃತ್ವ ವಹಿಸಿ ನೀಡಿದ ಮಾರ್ಗದರ್ಶನ ಅವಿಸ್ಮರಣೀಯ. ಆ ಧರ್ಮೋತ್ಸವದಲ್ಲಿ ಸಂಯೋಜಕ […]