ರಾಜ್ಯ ಮಟ್ಟದ ಜಲ ಜಾನಪದೋತ್ಸವ

ಉಡುಪಿ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಮತ್ತು ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಜಲ ಜಾನಪದೋತ್ಸವ ಕಾರ್ಯಕ್ರಮವು ಮಾರ್ಚ್ 20 ರಂದು ಬೆಳಗ್ಗೆ 8 ರಿಂದ ಮರವಂತೆ ರಾಷ್ಟ್ರೀಯ ಹೆದ್ದಾರಿಯ ಸಮುದ್ರ ಕಿನಾರೆಯ ಸಮೀಪ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಬಂದರು, ಒಳನಾಡು ಜಲಸಾರಿಗೆ ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, […]

ಮಾ.20: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರ ಪ್ರವಾಸ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾರ್ಚ್ 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 10 ಕ್ಕೆ ಮಲ್ಪೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಶಿರಸಿಗೆ ಪ್ರಯಾಣ ಬೆಳೆಸಲಿದ್ದಾರೆ.

ವಸತಿ ಶಾಲೆಗಳ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಮಾರ್ಚ್ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ನಡೆಯಲಿದೆ. ಪರೀಕ್ಷೆ ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ […]

ಮಾ.23 ರಂದು ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮವು ಮಾರ್ಚ್ 23 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820- […]

ವಾಯುಭಾರ ಕುಸಿತ: ಮಾ‌.20 ರಂದು ಕರಾವಳಿಯಾದ್ಯಂತ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಕೂಡ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮಾ.20 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ.21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ […]