ಅಕ್ಕಸಾಲಿಗ ವೃತ್ತಿ ಮಾಡುತ್ತಿರುವವರಿಗೆ ಇ- ಶ್ರಮ್ ಕಾರ್ಡ್ ಹಾಗೂ ಪಿಂಚಣಿ ನೋಂದಣಿ ಕಾರ್ಯಕ್ರಮ
ಉಡುಪಿ: ಅಸಂಘಟಿತ ಕಾರ್ಮಿಕ ವಲಯದಲ್ಲಿರುವ ಅಕ್ಕಸಾಲಿಗ ವೃತ್ತಿ ಮಾಡುತ್ತಿರುವ ಸದಸ್ಯರಿಗೆ ಇ- ಶ್ರಮ್ ಕಾರ್ಡ್ ಹಾಗೂ ಪಿಂಚಣಿ ನೋಂದಣಿ ಮತ್ತು ಕಾರ್ಡ್ ವಿತರಣೆ ಕಾರ್ಯಕ್ರಮವು ನಗರದ ವಳಕಾಡು ದೈವಜ್ಞ ಸಭಾಭವನದಲ್ಲಿ ನಡೆಯಿತು. ಕಾರ್ಮಿಕ ಅಧಿಕಾರಿ ಕುಮಾರ್, ಇ- ಶ್ರಮ್ ಯೋಜನೆ, ಪಿ.ಎಂ.ಎಸ್.ವೈ.ಎಮ್ ಮತ್ತು ಎನ್.ಪಿ.ಎಸ್ ಟ್ರೇರ‍್ಸ್ ಯೋಜನೆಯ ಕುರಿತು ಮಾಹಿತಿ ನೀಡಿ, ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರು ನೊಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ನೊಂದಾಯಿತ ಅಸಂಘಟಿತ ಕಾರ್ಮಿಕರಿಗೆ ಕಾರ್ಡುಗಳನ್ನು ವಿತರಿಸಲಾಯಿತು.
ಕಾಲಮಿತಿಯೊಳಗೆ ಸಮಸ್ಯೆಗಳ ಇತ್ಯರ್ಥ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಗಂಭೀರವಲ್ಲದ ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಗಂಭೀರ ದೂರುಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಇತ್ಯರ್ಥಪಡಿಸಲಾಗುವುದು. ಈ ಕುರಿತಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಮುದರಂಗಡಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ನಾಗರೀಕರು, ವಿಕಲಚೇತನರಿಗೆ ಸಂಬಂಧಪಟ್ಟ ದೂರುಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲಾಗುವುದು ಹಾಗೂ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಎಲ್ಲಾ ದೂರುಗಳನ್ನು ಬಗೆಹರಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು, […]
ಉಡುಪಿ: 700 ಗ್ರಾಂ. ಅಕ್ರಮ ಗಾಂಜಾ ವಶ
ಉಡುಪಿ: ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಕೋಟೆ ಹಾಗೂ ಉಡುಪಿಯ ಅಬಕಾರಿ ಉಪ ಆಯುಕ್ತೆ ರೂಪ ಎಂ ಇವರ ನಿರ್ದೇಶನದ ಮೇರೆಗೆ, ಉಡುಪಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಗುರುಮೂರ್ತಿ ಡಿ ಪಾಲೇಕರ್ ಮಾರ್ಗದರ್ಶನದಂತೆ, ಶುಕ್ರವಾರ ಉಡುಪಿ ತಾಲೂಕು ಮಲ್ಪೆ ಬಂದರ್‌ನ ಮೀನು ಹರಾಜು ನಡೆಯುವ ಸ್ಥಳದ ಎದುರಿನ ಮಂಜುಗಡ್ಡೆ ಖಾಲಿ ಮಾಡುವ ಜಾಗದಲ್ಲಿ ವಾಹನ ಸಂಖ್ಯೆ ಕೆ.ಎ20 ಎಎ-5230 ರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವುದನ್ನು ಕಂಡು ದಾಳಿ ನಡೆಸಿ, 700 […]
ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಿರಿ: ಸಿದ್ದರಾಮಯ್ಯ
ಉಡುಪಿ: ದೇಶ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ಹಿರಿಯಡಕ ಗಾಂಧಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭೂ ಸುಧಾರಣಾ ಕಾಯ್ದೆಯ 79 ಎ, ಬಿ ಹಾಗೂ ಸಿ ಸೆಕ್ಷನ್ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಉಳ್ಳವನನ್ನು ಭೂಮಿಯ ಒಡೆಯನ್ನನಾಗಿಸಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಹೋಟೆಲ್ ಗಳಲ್ಲಿ ಬೆಲೆ ನಿಗದಿ […]
ಉಡುಪಿ: ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಹಿರಿಯಡಕ ಗಾಂಧಿ ಮೈದಾನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಭಾರತದಲ್ಲಿ ಸಂವಿಧಾನ ಜಾರಿಯಾಗಿ 72 ವರ್ಷ ಕಳೆದರೂ, ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸಲು ಆಗಿಲ್ಲ. ಸಮಸಮಾಜ ನಿರ್ಮಾಣ ಇನ್ನೂ ಆಗಿಲ್ಲ. ಅವಕಾಶಗಳಿಂದ ವಂಚಿತರಾದ ಜನರಿಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು. ಅಂದಿನ ಇಂದಿರಾ ಗಾಂಧಿ ಸರ್ಕಾರವು ಜಾರಿಗೊಳಿಸಿದ ಉಳುವವನೇ ಭೂಮಿಯ ಒಡೆಯ […]