ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆ: ಅವಧಿ ವಿಸ್ತರಣೆ

ಉಡುಪಿ: ಭಾರತೀಯ ಚುನಾವಣಾ ಆಯೋಗವು  ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ನನ್ನ ಮತ ನನ್ನ ಭವಿಷ್ಯ ಒಂದು ಮತದ ಶಕ್ತಿ ವಿಷಯದ ಕುರಿತು ರಸಪ್ರಶ್ನೆ, ವೀಡಿಯೋ ತಯಾರಿಕೆ, ಗಾಯನ, ಭಿತ್ತಿಚಿತ್ರ ವಿನ್ಯಾಸ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯ ನಮೂದುಗಳನ್ನು [email protected] ನಲ್ಲಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾ.30: ಮರಗಳ ತೆರವು ಕುರಿತು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ವಾರಾಹಿ ಏತ ನೀರಾವರಿ ಕಾಮಗಾರಿ ಉದ್ದೇಶಕ್ಕಾಗಿ, ಕುಂದಾಪುರ ತಾಲೂಕು ಹಾಲಾಡಿ ಮತ್ತು ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮಗಳಲ್ಲಿ ಕಾದಿರಿಸಿದ ಸ್ಥಳಗಳಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 243 ಮರಗಳನ್ನು ತೆರವುಗೊಳಿಸುವ ಕುರಿತು, ಮಾರ್ಚ್ 30 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯ ಅಧಿಕಾರಿಯವರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, […]

ಕೊಡವೂರು: ಉಚಿತ ಕಾಂಪೋಸ್ಟ್ ಡ್ರಮ್ ಮತ್ತು ಉಚಿತ ತರಕಾರಿ ಬೀಜ ವಿತರಣೆ

ಉಡುಪಿ: ನಗರ ಸಭೆ ಉಡುಪಿ ಮತ್ತು ಸಾಹಸ್ ಎನ್. ಜಿ. ಓ ಜಂಟಿಯಾಗಿ ಆರೋಗ್ಯ ಸಮಾಜದ ನಿರ್ಮಾಣಕ್ಕಾಗಿ ಮನೆಯ ಹಸಿ ಕಸವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಉಚಿತ ಕಾಂಪೋಸ್ಟ್ ಡ್ರಮ್ ಮತ್ತು ಉಚಿತ ತರಕಾರಿ ಬೀಜ ವಿತರಣೆ ಕಾರ್ಯಕ್ರಮ ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ಕಾನಂಗಿ ಕೊಡವೂರುಯಲ್ಲಿ ನಡೆಯಿತು. ನಗರ ಸಭಾ ಅಧ್ಯಕ್ಷರು ಸುಮಿತ್ರಾ ಕೆ, ವಿಜಯ್ ಕೊಡವೂರು ನಗರ ಸಭಾ ಸದಸ್ಯರು, ಸಾಹಸ್ ಸಂಸ್ಥೆಯ ಸೂಪರ್ವೈಸರ್ ವಿಶಾಲ ದೇವಾಡಿಗ, ರಾಜೇಶ್, ಬೇಬಿ, […]

ಚೀನಾ: 133 ಪ್ರಯಾಣಿಕರಿದ್ದ ವಿಮಾನ ಪತನ

ಚೀನಾದ 133 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಈಸ್ಟರ್ನ್ ಏರ್‌ಲೈನ್ಸ್‌ ವಿಮಾನವು ಪತನಗೊಂಡಿದೆ. ಚೀನಾ ಈಸ್ಟರ್ನ್ ಏರ್‌ಲೈನ್ಸ್‌ಗೆ ಸೇರಿದ ಬೋಯಿಂಗ್ 737 ವಿಮಾನವು ದಕ್ಷಿಣ ಚೀನಾದ ಗುವಾಂಗ್ಸಿಯ ವುಝೌ, ಟೆಂಗ್  ಪ್ರದೇಶದ ಬೆಟ್ಟದಲ್ಲಿ ಪತನವಾಗಿದ್ದು, ವಿಮಾನವು ನೆಲಕ್ಕೆ ಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಎಂದು ಚೀನಾದ ಮಾಧ್ಯಮಗಳು ವರದಿಯನ್ನು ನೀಡಿದೆ.

ಕಾಪು; ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್‌ ಮಲ್ಲಾರ್‌ ಎಂದು ಗುರುತಿಸಲಾಗಿದೆ. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ […]