ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಎಸ್.ಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 266 ಶಾಲೆಗಳ 7229 ಬಾಲಕರು 6793 ಬಾಲಕಿಯರು ಸೇರಿದಂತೆ ಒಟ್ಟು 14022 ಜನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದು, ಅವರಲ್ಲಿ 13672 ಹೊಸದಾಗಿ, 298 ಜನ ಖಾಸಗಿ ವಿದ್ಯಾರ್ಥಿಗಳು […]
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದ್ದು, ಮಾ. 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ಇದೀಗ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ರೂ. ಮತ್ತು ಡೀಸೆಲ್‍ಗೆ 85.80 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21ರೂ., ಪ್ರತಿ ಲೀಟರ್ ಡೀಸೆಲ್‍ಗೆ 87.47ರೂ., ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78ರೂ., ಡೀಸೆಲ್ 94.94ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ರೂ. ಮತ್ತು ಡೀಸೆಲ್ 90.62 ರೂ., ಚೆನ್ನೈನಲ್ಲಿ ಪೆಟ್ರೋಲ್ […]
ಜಲ ಇದ್ದರೆ ಜೀವ, ನಿತ್ಯವೂ ಜಲ ದಿನವಾಗಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮಾನವ ಸೇರಿದಂತೆ ಎಲ್ಲಾ ಜೀವ ಸಂಕುಲಕ್ಕೆ ಜೀವ ಜಲವಾಗಿರುವ ನೀರಿನ ಮಹತ್ವ ಮತ್ತು ಅದರ ಸಂರಕ್ಷಣೆ ಕುರಿತಂತೆ ಪ್ರತೀ ಮನೆ ಮನೆಯಲ್ಲಿ ಜಾಗೃತಿ ಮೂಡಬೇಕು. ಜಲ ಇದ್ದರೆ ಮಾತ್ರ ಜೀವ ಎಂಬ ಅರಿವು ಎಲ್ಲರಲ್ಲೂ ಮೂಡಬೇಕು. ಪ್ರತಿನಿತ್ಯವೂ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆಯ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತಿರಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ನಗರಸಭೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಉಡುಪಿ ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಮತ್ತು ನೆಹರು […]
ಐ.ಎ.ಎಸ್, ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ
ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದ ಐ.ಎ.ಎಸ್, ಐ.ಪಿ.ಎಸ್, ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 29 ರ ಒಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೂ.ಸಂಖ್ಯೆ: 0821- 2515944 ಅನ್ನು ಸಂಪರ್ಕಿಸಿ, ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕ.ರಾ.ಮು.ವಿ ಕುಲಸಚಿವ ಪ್ರೊ.ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಲಿಗೆ ಯಂತ್ರ, ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ ಹಾಗೂ ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ ಹೊಂದಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಉಚಿತ ಹೊಲಿಗೆ ಯಂತ್ರ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಠಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಹಾಗೂ ಬ್ರೈಲ್ ಕಿಟ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 31 […]