ಪ.ಜಾತಿ ಪಂಗಡದವರ ಶ್ರೇಯೋಭಿವೃದ್ಧಿಗೆ ರೂಪಿಸಿದ ವಿಶೇಷ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಸರ್ಕಾರ ಪ.ಜಾತಿ ಹಾಗೂ ಪಂಗಡದವರ ಹಿತ ರಕ್ಷಣೆಗಾಗಿ ವಿಶೇಷ ಕಾನೂನುಗಳನ್ನು ಜಾರಿಗೆ ತಂದಿದೆ, ಅವುಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ರೀತಿಯ ಎಲ್ಲಾ ರೀತಿಯ ನೆರವು ಹಾಗೂ ಪರಿಹಾರಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ, ಪ.ಜಾತಿ ಮತ್ತು ಪಂಗಡದವರ ಹಿತರಕ್ಷಣಾ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಪ.ಜಾತಿ ಹಾಗೂ ಪಂಗಡದವರ ಕಲ್ಯಾಣಾಭಿವೃದ್ಧಿ ಸೇರಿದಂತೆ ಅವರನ್ನು ಸಮಾಜದ ಮುಖ್ಯವಾಹಿನಿಗೆ […]

ಬೈಲೂರು: ಶ್ರೀ ದುರ್ಗಾಪರಮೇಶ್ವರಿ ತರಕಾರಿ, ಹಣ್ಣು- ಹಂಪಲು ಹಾಗೂ ಹೂವಿನ ಅಂಗಡಿ ಉದ್ಘಾಟನೆ

ಬೈಲೂರು: ಕಾರ್ಕಳ ಬೈಲೂರು ಪಳ್ಳಿ ಕ್ರಾಸ್ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾಯಿ ಸಮೃದ್ಧಿ ಕಾಂಪ್ಲೆಕ್ಸ್ ನಲ್ಲಿ  ‘ಶ್ರೀ ದುರ್ಗಾಪರಮೇಶ್ವರಿ’ ತರಕಾರಿ, ಹಣ್ಣು- ಹಂಪಲು ಹಾಗೂ ಹೂವಿನ ಅಂಗಡಿವು ಮಾರ್ಚ್ 18 ರಂದು ಶುಭಾರಂಭಗೊಂಡಿತು. ಇಲ್ಲಿ ತರಕಾರಿ, ಹಣ್ಣು- ಹಂಪಲು ಹಾಗೂ ವಿವಿಧ ರೀತಿಯ ಹೂವುಗಳು ಲಭ್ಯವಿದ್ದು, ಹೂವಿನ ವೈವಿಧ್ಯಮಯ ಅಲಂಕಾರವನ್ನು ಕೂಡ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಮಾಲೀಕರಾದ ಸನತ್, ಶರತ್ ಹಾಗೂ ಸಂದೀಪ್ ತಿಳಿಸಿದ್ದಾರೆ. .

ಮಾರ್ಚ್ 28 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ […]

ಬ್ರಹ್ಮಾವರ: ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಇವರ ನೂತನ ನಾಟಕ ‘ದೂತ ಘಟೋತ್ಕಚ’ ಉದ್ಘಾಟನೆ ಹಾಗೂ ಪ್ರದರ್ಶನ

ಬ್ರಹ್ಮಾವರ: ಬ್ರಹ್ಮಾವರ ಗಾಂಧಿನಗರ ಬೈಕಾಡಿ ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಇವರ ನೂತನ ನಾಟಕ ಪ್ರಸ್ತುತಿ ‘ದೂತ ಘಟೋತ್ಕಚ’ ವು ಮಾ.20 ರಂದು ತೆಕ್ಕಟ್ಟೆಯ ಹಯಗ್ರೀವ ಸಭಾಮಂಟಪದಲ್ಲಿ ಉದ್ಘಾಟನೆಗೊಂಡು ಪ್ರದರ್ಶನಗೊಂಡಿತು. ಸಮುದಾಯ ಕುಂದಾಪುರದ ಅಧ್ಯಕ್ಷರು ಹಾಗೂ ಶಿಕ್ಷಣ ತಜ್ಞರು ಆಗಿರುವ ಉದಯ ಗಾಂವ್ಕರ್ ಉದ್ಘಾಟಿಸಿ ಮಾತನಾಡಿ ತೆಕ್ಕಟ್ಟೆಯ ಭಾಗ ಕಳೆದ ಹಲವು ವರ್ಷಗಳಿಂದ ಸಾಂಸ್ಕೃತಿಕ ಕ್ಷೇತ್ರವಾಗಿ ಬೆಳವಣಿಗೆ ಹೊಂದುತ್ತಾ ಇದೆ. ನಾಲ್ಕು ಜನ ಕೂಡಿ ನಡೆಸುವ ಯಾವುದೇ ಸಂಘಟನೆಯೂ ಕೂಡ ಸಂತೋಷವನ್ನು ನೀಡುವಂತದ್ದು ಮತ್ತೆ ಹೀಗೆ […]

ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕುಂಭಾಭಿಷೇಕ ಮಾರ್ಚ್ 31ರಿಂದ ಏಪ್ರಿಲ್ 10ರ ವರೆಗೆ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ದೇವಳದ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಶ್ರೀದೇವಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ಆಡಳಿತಾಧಿಕಾರಿ ಡಾ. ರೋಷನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಕೃಷ್ಣಮೂರ್ತಿ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಸಂಜೀವ ಎ., ದೇವಸ್ಥಾನದ ಅರ್ಚಕ ಗುರುರಾಜ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ನಾರಾಯಣ […]