ಮಾ. 27 ರಿಂದ 29ರ ವರೆಗೆ ಕುಂಟಾಡಿ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ “ಗಡುವಾಡು ನೇಮ”
ಕಾರ್ಕಳ: ಕುಂಟಾಡಿ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ 60 ವರ್ಷಕ್ಕೊಮ್ಮೆ ನಡೆಯುವ ಗಡುವಾಡು ನೇಮವು ಮಾ.27 ರಿಂದ 29 ರ ವರೆಗೆ ಬಂಜಿನಡ್ಕ ತಾವಿನಲ್ಲಿ ನಡೆಯಲಿದೆ. ಗ್ರಾಮದ ದೈವಗಳಾದ ಶ್ರೀ ರಕ್ತೇಶ್ವರಿ ಮತ್ತು ವ್ಯಾಘ್ರಚಾಮುಂಡಿ ದೈವಗಳ 60 ವರ್ಷಕ್ಕೊಮ್ಮೆ ನಡೆಯುವ ಗೆಡುವಾಡು ನೇಮ ಇದಾಗಿದ್ದು, ಧಾರ್ಮಿಕ ಕಾರ್ಯವನ್ನು ಪುತ್ತೂರು ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ ನಡೆಯಲಿದೆ. ಮಾ. 27 ರಂದು 11.30 ಕ್ಕೆ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, 12:30 ಕ್ಕೆ ನಂದಿಗೋಣ ನೇಮ ನಡೆಯಲಿದೆ. ಬೆರ್ಮನಬೆಟ್ಟು […]
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ
ಉಡುಪಿ: ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮುಂದಿನ 5 ವರ್ಷಗಳ ಅವಧಿಗೆ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ಕೆ. ನಾಗೇಶ್ ಭಟ್ ಹಾಗೂ ಸಂಘದ ನಿರ್ದೇಶಕರಾಗಿ ಹರೀಶ್ ಹೆಗ್ಡೆ, ಲಕ್ಷ್ಮಣ್ ಜಿ. ನಾಯಕ್, ವಿಠಲ ಎಂ.ಪೈ, ಬಿ. ಅಶೋಕ್ ಪೈ, ಸುನೀಲ್ ಕುಮಾರ್ ಶೆಟ್ಟಿ, ಶಿವಪ್ರಸಾದ್ ಎಸ್. ಶೆಟ್ಟಿ, ಸುಧೀರ್, ಗಿರಿಜಾ […]
ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 8 ರಿಂದ 13 ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: 080-22484516/22107704 ಅಥವಾ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ಅಥವಾ […]
ಏ.1 ರಿಂದ 6 ರ ವರೆಗೆ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏ.1 ರಿಂದ 6 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ ಹೀಗಿದೆ: ಏಪ್ರಿಲ್ 1 ರಂದು ಕೆರಾಡಿ ಗ್ರಾಮ ಪಂಚಾಯತ್‌ನಲ್ಲಿ ಹಳ್ಳಿಹೊಳೆ, ಕೆರಾಡಿ ಹಾಗೂ […]
ವಸತಿ ಯೋಜನೆ: ಅವಧಿ ವಿಸ್ತರಣೆ
ಉಡುಪಿ: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಫಲಾನುಭವಿಗಳು, ವಸತಿ ಯೋಜನೆಗೆ ಆನ್‌ಲೈನ್ www.adcl.karnataka.gov.in ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ […]