ಸೈನಿಕರಿಗೆ ವರ್ಷದಲ್ಲಿ ಕನಿಷ್ಠ ನೂರು ದಿನ ರಜೆ ನೀಡಲು ಚಿಂತನೆ
ನವದೆಹಲಿ: ನಮ್ಮ ದೇಶದ ಸಿಎಪಿಎಫ್ ಯೋಧರು ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಕನಿಷ್ಠ 100 ದಿನಗಳ ರಜೆ ನೀಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಸ್ತಾವವು ಶೀಘ್ರದಲ್ಲಿ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಸ್ತಾವದ ಸಮಗ್ರ ನೀತಿಯ ರೂಪುರೇಷೆಗಳನ್ನು ರೂಪಿಸಲಾಗಿದ್ದು, ಇದರ ಅನುಷ್ಠಾನಕ್ಕೆ ಇರುವ ಅಡ್ಡಿಗಳ ನಿವಾರಣೆಗೆ ಕೇಂದ್ರ ಗೃಹ ಸಚಿವಾಲಯವು ಹಲವು ಸಭೆಗಳನ್ನು ನಡೆಸಿದೆ. ಅತ್ಯಂತ ಸವಾಲೆನಿಸುವ ಪರಿಸರದ ವಾತಾವರಣ ಮತ್ತು ದೂರದ ಸ್ಥಳಗಳಲ್ಲಿ ಕ್ಲಿಷ್ಟಕರ ಕೆಲಸಗಳನ್ನು ನಿರ್ವಹಿಸುವ […]
ತೀರ್ಥಹಳ್ಳಿ: ಬಿಜೆಪಿ ಮುಖಂಡ ಗುಂಡೇಟಿಗೆ ಬಲಿ
ತೀರ್ಥಹಳ್ಳಿ: ಅರಣ್ಯ ಪ್ರದೇಶದಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ನಡೆದಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ದೌಡಾಯಿಸಿದ್ದಾರೆ. ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ. ಕಾಂತರಾಜ್ ಅವರು ಅಂಬುತೀರ್ಥ […]
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು: ಪೂರ್ವಸಿದ್ಧತೆಯ ವಿವರ ಹೀಗಿದೆ.!!
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. ಒಟ್ಟು 8,73,846 ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. ಹಾಗೂ ಪರೀಕ್ಷೆಯಲ್ಲಿ 04 ಜನ […]
ಮಂಗಳೂರು: “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಮಂಗಳೂರು: ಶನಿವಾರ ನಡೆದ 5ನೇ ವರ್ಷದ ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 03 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 17 ಜೊತೆ ನೇಗಿಲು ಹಿರಿಯ: 27 ಜೊತೆ ಹಗ್ಗ ಕಿರಿಯ: 21 ಜೊತೆ ನೇಗಿಲು ಕಿರಿಯ: 66 ಜೊತೆ ಒಟ್ಟು ಕೋಣಗಳ ಸಂಖ್ಯೆ: 142 ಜೊತೆ ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಕಾಂತಾವರ ಬೇಲಾಡಿ […]