ಮಾ.29: ಕೋವಿಡ್ ವಾರಿಯರ್ಸ್ ಗೆ ಅಭಿನಂದನಾ ಸಮಾರಂಭ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ವಾರಿಯರ್ಸ್ ಗೆ ಅಭಿನಂದನಾ ಸಮಾರಂಭವು ಮಾರ್ಚ್ 29 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾ. 29 ರಂದು ಉದ್ಯೋಗ ಮೇಳ

ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ|| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ […]

ಜಿಲ್ಲೆಯಲ್ಲಿ ಏ.1 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 1 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. […]

ಜಿಲ್ಲೆಯ ಸಂಜೀವಿನಿ ಯೋಜನೆಯ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ನ,  ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ, ಸಂಜೀವಿನಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಮಣಿಪಾಲದ ಗೋಲ್ಡನ್ ಜುಬಿಲ್ ಹಾಲ್‌ನಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಲಜೀವನ್ ಮಿಷನ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಹಯೋಗದಲ್ಲಿ ನಡೆದ ಸಂಜೀವಿನಿ ಗ್ರಾಮ […]

ನಿಟ್ಟೆ: “ಅಕ್ಷರ ಸಂತ” ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ರೋಟರಿ ಪೌಲ್ ಹ್ಯಾರಿ ಫೆಲೋಶಿಪ್ ಪ್ರದಾನ

ನಿಟ್ಟೆ: ನಿಟ್ಟೆ ರೋಟರಿ ಕ್ಲಬ್ ಇತ್ತೀಚೆಗೆ ರೋಟರಿ ವಲಯ- 5 ಜಿಲ್ಲೆ 3182 ಕ್ಕೆ  2022-23 ನೇ ಸಾಲಿನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿ ಜ್ಞಾನಾಂಮೃತ ತರಬೇತಿಯನ್ನು ಆಯೋಜಿಸಿತ್ತು. ಈ ಅರ್ಧ ದಿನದ ಅಧಿವೇಶನವನ್ನು ಜಿಲ್ಲೆಯ ಗವರ್ನರ್ ರಂಗನಾಥ್ ಭಟ್ ಉದ್ಘಾಟಿಸಿದರು. ‘ರೋಟರಿಯನ್ನು ಕಲ್ಪಿಸಿಕೊಳ್ಳಿ’ ಎಂಬ ಹೊಸ ಥೀಮ್ ಅನ್ನು ಗಮನದಲ್ಲಿಟ್ಟುಕೊಂಡು ಸಮಾಜಕ್ಕೆ ಸಾಧ್ಯವಾದಷ್ಟು ಸೇವೆ ಸಲ್ಲಿಸುವಂತೆ ಅವರು ರೋಟರಿ ಸದಸ್ಯರಿಗೆ ಕರೆ ನೀಡಿದರು. ಈ ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾದ “ಅಕ್ಷರ ಸಂತ” ಪದ್ಮಶ್ರೀ ಹರೇಕಳ […]