ಆನ್‌ಲೈನ್ ವಂಚನೆ ತಡೆಗೆ ವ್ಯಾಪಕ ಜಾಗೃತಿ ಮೂಡಿಸಿ: ಡಾ. ನವೀನ್ ಭಟ್

ಉಡುಪಿ: ಆನ್‌ಲೈನ್ ಮೂಲಕ ಬ್ಯಾಂಕ್ ಗ್ರಾಹಕರನ್ನು ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಜಿಲ್ಲೆಯ ಗ್ರಾಮೀಣ ಭಾಗದ ಬ್ಯಾಂಕ್ ಗ್ರಾಹಕರಿಗೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಂಚನೆಯಿಂದ ತಡೆಯುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ನ ಅಧಿಕಾರಿಗಳಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಸೂಚನೆ ನೀಡಿದರು. ಅವರು ಇಂದು ಜಿ.ಪಂ. ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ಯಾಂಕ್‌ನ ಗ್ರಾಹಕರ ಮೊಬೈಲ್‌ಗೆ ಬರುವ ವಿವಿಧ […]

ಕೊಂಕಣ್ ರೈಲ್ವೇಸ್ ಮುಂಬೈ ಇವರ ವತಿಯಿಂದ ಮಹೇಂದ್ರ ಬೊಲೇರೋ ವಾಹನ ಹಸ್ತಾಂತರ.

ಉಡುಪಿ: ಕೊಂಕಣ್ ರೈಲ್ವೇಸ್ ಮುಂಬೈ ಇವರ ವತಿಯಿಂದ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ) ಅನುದಾನದಡಿಯಲ್ಲಿ ಮಹೇಂದ್ರ ಬೊಲೇರೋ ವಾಹನವನ್ನು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೊಂಕಣ್ ರೈಲ್ವೇಸ್ ಅಧಿಕಾರಿಗಳಾದ ಸುಧಾ ಕೃಷ್ಣಮೂರ್ತಿ, ಬಿ.ಬಿ.ನಿಖಂ, ಆಶಾ ಶೆಟ್ಟಿ, ಡಾ. ಸ್ಟೀವೆನ್ ಜಾರ್ಜ್, ಜೈಸ್ವಾಲ್, ಬಿ.ಎಮ್ ವೆಂಕಟೇಶ್, ಆರೋಗ್ಯ ಇಲಾಖಾ ಅಧಿಕಾರಿಗಳಾದ ಡಾ ಪ್ರಶಾಂತ್ […]

ನಿಮ್ಮ‌ ವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ ಮತ್ತೆ ಮಾತಾಡೋಣ; ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು

ಉಡುಪಿ: ಪ್ರಸ್ತುತ ನಾಡಿನಲ್ಲಿ ಹಿಂದೂ ಮುಸ್ಲಿಮ್ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರ ಗೊಳಿಸಬೇಕೆಂದು ಅಪೇಕ್ಷಿಸಿ ತಮ್ಮನ್ನು ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒಳ್ಳೆಯ ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ. ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ .‌ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ ? ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆ ನುಗ್ಗಿ ಬೆದರಿಸಿ […]

ಕಣ್ಣನ್ನು ರಾಷ್ಟ್ರೀಯ ಆಸ್ತಿಯಾಗಿ ಘೋಷಿಸಿ: ವಿಜಯ್ ಕೊಡವೂರು ಮನವಿ

ಕುಂದಾಪುರ: ನಮ್ಮ ದೇಶ ಪ್ರಪಂಚಕ್ಕೆ ಮಾದರಿಯಾಗಿದೆ ಪ್ರಪಂಚಕ್ಕೆ ಸಂಸ್ಕಾರ ಕೊಟ್ಟಿದೆ, ಬದುಕುವ ರೀತಿಯನ್ನು ಕಳಿಸಿದೆ ಪ್ರಪಂಚಕ್ಕೆ ದಿಕ್ಕು ತೋರಿಸುವ ಗುರುವಿನ ಸ್ಥಾನದಲ್ಲಿ ಆದರೆ ಕಾರ್ನಿಯ ಸಮಸ್ಯೆಗೆ ಮಾತ್ರ ನಾವು ಸರಿಯಾದ ಯೋಚನೆ ಮಾಡಿ ಹೆಜ್ಜೆ ಇಡಬೇಕಾಗಿದೆ. ಅಂದಾಜು 1ಕೋಟಿ 40 ಲಕ್ಷ ಜನರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಅದನ್ನು ನಾವು ಸರಿಪಡಿಸಲು ಸಾಧ್ಯವಿಲ್ಲ. ಆದರೆ ಅಂದಾಜು 30 ಲಕ್ಷ ಜನರು ಕಾರ್ನಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ಮನಸ್ಸು ಮಾಡಿದರೆ ನಮ್ಮ ಇಚ್ಛಾಶಕ್ತಿ ಇದ್ದರೆ ಕೇವಲ 25 ದಿನಗಳಲ್ಲಿ […]

ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏ.1 ರಿಂದ 16 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ ಹೀಗಿದೆ: ಏಪ್ರಿಲ್ 1 ರಂದು ಕೆರಾಡಿ ಗ್ರಾಮ ಪಂಚಾಯತ್‌ನಲ್ಲಿ ಹಳ್ಳಿಹೊಳೆ, ಕೆರಾಡಿ ಹಾಗೂ […]