ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ: ಎ.2 ರಿಂದ ಗ್ರಾಮ ಭಜನೆ

ಉಡುಪಿ: ಉಡುಪಿ ಜಿಲ್ಲೆಯ 1400 ವರ್ಷ ಇತಿಹಾಸ ಇರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಮಗ್ರ ಜೀರ್ಣೋದ್ದಾರಗೊಳ್ಳುತ್ತಿದ್ದು ಮೇ 3ರಿಂದ ಮೇ 10ರ ತನಕ ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ. ‌ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸಮಸ್ತ ಕಡಿಯಾಳಿ ಗ್ರಾಮದ ಮನೆ ಮನೆಗಳಲ್ಲಿ ‘ಗ್ರಾಮ ಭಜನೆ’ ಎಂಬ ವಿನೂತನ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 2 ಶನಿವಾರ ಚಂದ್ರಮಾನ ಯುಗಾದಿಯ ಪರ್ವ ಕಾಲದಲ್ಲಿ ಸಂಜೆ 4 ಗಂಟೆಗೆ ಕಾಣಿಯೂರು ಮಠಾದೀಶರಾದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಈ […]

ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ಶಿಕ್ಷೆ

ಉಡುಪಿ: ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ಜೆ.ಸಿ.ಬಿ.ಯಿಂದ ಮರಗಳನ್ನು ಕೆಡವಿ, ಆವರಣ ಗೋಡೆಯನ್ನು ಹಾನಿಗೊಳಿಸಿ, ಅವಾಚ್ಯ ಪದಗಳಿಂದ ಬೈದು, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2014 ಫೆಬ್ರವರಿ 13 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆರೋಪಿಗಳಾದ ಉಡುಪಿಯ ಬಡನಿಡಿಯೂರು ಗ್ರಾಮದ ಅರುಣ್ ಸನಿಲ್, ಆಲ್ವಿನ್ ವಾಝ್, ತೆಂಕನಿಡಿಯೂರು ಗ್ರಾಮದ ಜೋಯ್ ಹೌಸ್ ನಿವಾಸಿ ಪ್ರೀಯಾ ರೋಡ್ರಿಗಸ್, ತೆಂಕನಿಡಿಯೂರು ಗ್ರಾಮದ […]

ಜಿಲ್ಲೆಯಲ್ಲಿ ಏ.20 ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 4 ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 20 ರ ಸಂಜೆ 6 ಗಂಟೆಯವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 […]

ಏ.3, 4: ಕೃಷಿ ಇಲಾಖೆ ಸಚಿವರ ಪ್ರವಾಸ

ಉಡುಪಿ: ರಾಜ್ಯದ ಕೃಷಿ ಇಲಾಖೆ ಸಚಿವ ಬಿ.ಸಿ ಪಾಟೀಲ್ ಅವರು ಏಪ್ರಿಲ್ 3 ಮತ್ತು 4 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ.3 ರಂದು ಸಂಜೆ 5.30 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಬೈಂದೂರಿನಲ್ಲಿ ವಾಸ್ತವ್ಯ ಮಾಡಲಿರುವರು. ಏ. 4 ರಂದು ಬೆಳಗ್ಗೆ 10.30 ಕ್ಕೆ ಬೈಂದೂರು ತಾಲೂಕು ಉಪ್ಪುಂದ ಗ್ರಾಮದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ದ ನೂತನ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ […]

ಕೊಲ್ಲೂರು: ವ್ಯಕ್ತಿ ನಾಪತ್ತೆ

ಬೈಂದೂರು: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ನಿವಾಸಿ ತುಕಾರಾಮ ಶೆಟ್ಟಿಗಾರ್ (52 ವರ್ಷ) ಎಂಬುವರು ಮಾರ್ಚ್ 29 ರಂದು ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಹೊಂದಿದ್ದು, ಕನ್ನಡ, ತುಳು ಮಲೆಯಾಳಿ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೋಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: […]