ಪರೀಕ್ಷಾ ನೇಮಕಾತಿ: ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ಟ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ & ಸಿಬಿಎನ್) ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷಾ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಕುರಿತು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ https://ssc.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ […]
ನಗರಸಭೆ: ಆಸ್ತಿ ತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡ ಮತ್ತು ಕೃಷಿಯೇತರ ನಿವೇಶನಗಳ ಮಾಲೀಕರು ಹಾಗೂ ಅನುಭೋಗದಾರರಿಗೆ, 2022-23 ನೇ ಸಾಲಿನ ಆಸ್ತಿತೆರಿಗೆಯಲ್ಲಿ ಶೇ. 5 ರಷ್ಟು ರಿಯಾಯಿತಿಯನ್ನು ಪಡೆಯಲು ಏಪ್ರಿಲ್ 30 ರ ವರೆಗೆ ಅವಕಾಶವಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿ ತೆರಿಗೆಯನ್ನು ರಿಯಾಯಿತಿಯೊಂದಿಗೆ ನಿಗದಿತ ಅವಧಿಯೊಳಗೆ ಪಾವತಿಸಿ, ನಗರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬನ್ನಂಜೆ ಅಂಚೆ ಕಚೇರಿ ಕಟ್ಟಡ ಸ್ಥಳಾಂತರ
ಉಡುಪಿ: ಪ್ರಸ್ತುತ ಬಿಲ್ಲವರ ಸೇವಾ ಸಂಘ ಉಡುಪಿ (ರಿ), ನಾರಾಯಣ ಗುರು ನಗರ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಬನ್ನಂಜೆ ಅಂಚೆ ಕಚೇರಿಯು, ಉಡುಪಿ ಮಿನಿ ವಿಧಾನಸೌಧದ ಎದುರುಗಡೆ ಇರುವ ಜಿಲ್ಲಾ ಪಂಚಾಯತ್ ಹಳೇ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದ್ದು, ಏಪ್ರಿಲ್ 4 ರಿಂದ ಕಾರ್ಯನಿರ್ವಹಿಸಲಿದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹರಿದು ಬಂತು ದಾಖಲೆಯ ಹೊರೆಕಾಣಿಕೆ
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವ ಹಾಗೂ ಚತುಃಪವಿತ್ರ ನಾಗಬ್ರಹ್ಮಮಂಡಲೋತ್ಸವಕ್ಕೆ ಸಮಸ್ತ ಮೊಗವೀರ ಕುಲಭಾಂದವರಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆ ಸಮರ್ಪಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮೂಲಕ ಆಗಮಿಸಿದ ದಕ್ಷಿಣ ವಿಭಾಗದ ಹೊರೆಕಾಣಿಕೆ ಮೆರವಣಿಗೆಯನ್ನು ಎರ್ಮಾಳ್ ನಲ್ಲಿ, ಉತ್ತರದ ಶಿರೂರು ಗಡಿಭಾಗದಿಂದ ಮೊದಲ್ಗೊಂಡು ಆಗಮಿಸಿದ ಉಡುಪಿ ಜಿಲ್ಲೆಯ ಹೊರೆ ಕಾಣಿಕೆ ಮೆರವಣಿಗೆಗೆ ಮುಳೂರಿನಲ್ಲಿ ಚಾಲನೆ ನೀಡಲಾಗಿದೆ. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್ ಸಹಿತ ದ.ಕ. […]
ಮಲ್ಪೆ: ಎ.10 ರಂದು ಸ್ಕೈಲೈಟ್ಸ್ ಇವೆಂಟ್ಸ್ ನಿಂದ ‘ಕೋಸ್ಟಲ್ ಡೈನ್’ ಫುಡ್ ಫೆಸ್ಟಿವಲ್
ಉಡುಪಿ: ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ಮಲ್ಪೆ ಕಡಲತಡಿಯಲ್ಲಿ ಎಪ್ರಿಲ್ 10ರ ಭಾನುವಾರ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಉಡುಪಿಯ ‘ಸ್ಕೈಲೈಟ್ಸ್ ಇವೆಂಟ್ಸ್’ ಅರ್ಪಿಸುವ ‘ಕೋಸ್ಟಲ್ ಡೈನ್’ ಎಂಬ ಅನ್‌ಲಿಮಿಟೆಡ್ ಫುಡ್ ಫೆಸ್ಟಿವಲ್ ನಡೆಯಲಿದೆ. ಈ ಕಾರ್ಯಕ್ರಮದ ವಿಶೇಷತೆ ಕೇವಲ 399 ರೂಪಾಯಿಗೆ ಅನ್‌ಲಿಮಿಟೆಡ್ ಫುಡ್ ಅನ್ನು ಸವಿಯುವ ಅವಕಾಶವಿದ್ದು, ಸಸ್ಯಾಹಾರ, ಮಾಂಸಾಹಾರ, ಮೀನಿನ ಖಾದ್ಯ, ಚಿಕನ್ ಖಾದ್ಯ ಜೊತೆಗೆ ತುಳುನಾಡಿನ ಹಲವಾರು ಖಾದ್ಯಗಳನ್ನು ಕೇವಲ 399 ರೂಪಾಯಿ ಪಾವತಿಸುವ ಮೂಲಕ ನೀವು […]