ಏಳನೇ ಬಾರಿಗೆ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ ಮಹಿಳಾ ತಂಡ
ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಆಸ್ಟ್ರೇಲಿಯಾ ಅಭೂತಪೂರ್ವ ಜಯಸಾಧಿಸಿದ್ದು, ಈ ಮೂಲಕ ಏಳನೇ ಬಾರಿಗೆ ಮಹಿಳಾ ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 356 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಪರ ಅಲಿಸಾ ಹೀಲಿ ಶತಕ (170) ಸಿಡಿಸಿ ಸಂಭ್ರಮಿಸಿದರು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡವು 43.4 ಓವರ್ನಲ್ಲಿ 285 ರನ್ಗೆ ಎಲ್ಲಾ ಆಲೌಟ್ ಆದವು. ಇಂಗ್ಲೆಂಡ್ ಅನ್ನು […]
ಮಲ್ಪೆ: ಸರಸರನೆ ತೆಂಗಿನ ಮರ ಏರಿ ಶೇಂದಿ ತೆಗೆದ ಪ್ರಣವಾನಂದ ಸ್ವಾಮೀಜಿ
ಮೂರ್ತೆದಾರರ ಕಷ್ಟ ಅರಿತುಕೊಳ್ಳುವ ನಿಟ್ಟಿನಲ್ಲಿ ಪ್ರಣವಾನಂದ ಸ್ವಾಮೀಜಿ ಸ್ವತಃ ತಾವೇ ತೆಂಗಿನ ಮರ ಏರಿ ಶೇಂದಿ ತೆಗೆದಿರುವ ಬಗ್ಗೆ ವರದಿಯಾಗಿದೆ. ಭಾನುವಾರ ಉಡುಪಿಗೆ ಆಗಮಿಸಿದ ಸ್ವಾಮೀಜಿ, ಮಲ್ಪೆಯ ಮೂರ್ತೆದಾರರ ಮನೆಯೊಂದಕ್ಕೆ ಭೇಟಿ ನೀಡಿ ಮೂರ್ತೆದಾರಿಕೆ ಸಮಸ್ಯೆ ಕುರಿತು ಮಾತುಕತೆ ನಡೆಸಿ ಚರ್ಚಿಸಿದರು. ಬಳಿಕ ಸ್ವಾಮೀಜಿ ಮನೆಯ ಎದುರಿನ ತೆಂಗಿನ ಮರಕ್ಕೆ ಸರಸರನೇ ಏರಿದರು. ತೆಂಗಿನ ಮರದ ತುದಿಯಲ್ಲಿದ್ದ ಶೇಂದಿಯನ್ನು ತೆಗೆದು ಎಲ್ಲರನ್ನು ನಿಬ್ಬೆರಗುಗೊಳಿಸಿದರು.
ಬಿಲ್ಲವ ಯುವಕರು ಕೋಮು ಸಂಘರ್ಷದ ಕಡೆ ಗಮನಕೊಡದೆ ಶಿಕ್ಷಣ, ಉದ್ಯೋಗಕ್ಕೆ ಒತ್ತು ನೀಡಿ; ಉಡುಪಿಯಲ್ಲಿ ಪ್ರಣವಾನಂದ ಶ್ರೀ ಕರೆ
ಬಿಲ್ಲವ ಯುವಕರು ಕೋಮು ಸಂಘರ್ಷದ ಕಡೆ ಗಮನಹರಿಸದೆ, ಉದ್ಯೋಗ, ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ರಾಷ್ಟ್ರೀಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಕರೆನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡಬಾರದು. ಈ ಭೂಮಿಯಲ್ಲಿ ನಮ್ಮ ಜೀವನ ಇರುವುದು ಸ್ವಲ್ಪ ದಿನ. ಅದನ್ನು ಒಳ್ಳೆಯ ಕೆಲಸಕ್ಕೆ ಬಳಸಬೇಕು.ಯಾವುದೇ ಪಕ್ಷದಲ್ಲಿ ಇದ್ದರು ಅದರ ಸಿದ್ದಾಂತಕ್ಕೆ ಬದ್ಧರಾಗಿರಬೇಕೇ ಹೊರತು, ಇನ್ನೊಂದು ಜನಾಂಗಕ್ಕೆ ನೋವುಂಟು ಮಾಡುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.
ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಧರ್ಮ ಧರ್ಮದ ನಡುವೆ ಸಂಘರ್ಷ ಬೇಡ; ಪ್ರಣವಾನಂದ ಸ್ವಾಮೀಜಿ ಕರೆ
ಉಡುಪಿ: ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಶಾಂತಿ ನೆಲೆಸಬೇಕು. ಧರ್ಮ ಧರ್ಮದ ನಡುವೆ ಘರ್ಷಣೆಗೆ ಅವಕಾಶ ಮಾಡಿಕೊಡಬಾರದು ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶರಣಬಸವೇಶ್ವರ ಮಠಾಧಿಪತಿ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಂವಿಧಾನವೇ ನಮ್ಮ ದೇವರು. ನಮ್ಮ ಆಚಾರ ವಿಚಾರ ಅದಕ್ಕೆ ಧಕ್ಕೆಯಾಗಬಾರದು. ಅವರವರ ಧರ್ಮದ ಆಚಾರ ವಿಚಾರಗಳನ್ನು ಅವರು ಆಚರಣೆ ಮಾಡಿಕೊಂಡು ಹೋಗಲಿ. ಅದು ಬಿಟ್ಟು ಒಂದು ಧರ್ಮದ ಸಂಪ್ರದಾಯ, ಆಚಾರ-ವಿಚಾರಗಳನ್ನು […]
ಗೋ ಕಳ್ಳತನ ಮುಸ್ಲಿಂ ಒಕ್ಕೂಟ ಖಂಡನೆ
ಕಾರ್ಕಳ: ಕಾರ್ಕಳ ಪರಿಸರದಲ್ಲಿ ಇತ್ತೀಚಿಗೆ ಗೋ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋ ಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ( ರಿ) ಕಾರ್ಕಳ ತಾಲೂಕು ಅಧ್ಯಕ್ಷ ಮೊಹಮ್ಮದ್ ಶರೀಫ್ ಬಂಗ್ಲೆಗುಡ್ಡೆ ಇವರು ತೀವ್ರವಾಗಿ ಖಂಡಿಸಿದ್ದಾರೆ. ಗೋ ಕಳ್ಳತನದಿಂದ ಗೋವುಗಳನ್ನು ನಂಬಿ ಅವುಗಳ ಆದಾಯದಿಂದಲೇ ಬದುಕು ಕಟ್ಟಿಕೊಂಡಿರುವ ಅದೆಷ್ಟೋ ಬಡಜನರು ಗೋವುಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದಾರೆ ಮಾತ್ರವಲ್ಲದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಇಂತಹ […]