ಬಿಜೆಪಿ ಸ್ಥಾಪನಾ ದಿನಾಚರಣೆ, ಅಂಬೇಡ್ಕರ್ ಜಯಂತಿ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಎ.6 ರಂದು ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣಗೈದು ಬಿಜೆಪಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಹಾಗೂ ಎ.14 ರಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಯನ್ನು ಸೇವಾ ಕಾರ್ಯಗಳ ಮೂಲಕ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ […]

ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಮಾರ್ಚ್ 22 ರಂದು ಮಣಿಪಾಲದ ಆಸ್ಪತ್ರೆಗೆ ರಕ್ತ ಪರೀಕ್ಷೆಗೆಂದು ತೆರಳಿದ ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ನಿವಾಸಿ ಪವಾಜ್ ಅಹಮ್ಮದ್ (37) ಎಂಬ ವ್ಯಕ್ತಿಯು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡನೆಯ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಉರ್ದು, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಪೊಲೀಸ್ ವೃತ್ತ […]

ರಸ್ತೆ ಅಗಲೀಕರಣಕ್ಕೆ ರೂಪಿಸಿರುವ ನಿಯಮಗಳನ್ನು ಬದಲಾಯಿಸಿ: ಉಸ್ತುವಾರಿ ಸಚಿವ ಎಸ್. ಅಂಗಾರ

ಉಡುಪಿ: ಜಿಲ್ಲೆಯಲ್ಲಿನ ಗ್ರಾಮೀಣ ರಸ್ತೆ, ಜಿಲ್ಲಾ ರಸ್ತೆ, ಮೀನುಗಾರಿಕಾ ರಸ್ತೆ, ರಾಜ್ಯ ಹೆದ್ದಾರಿ, ರಾಷ್ಟ್ರೀಯ  ಹೆದ್ದಾರಿಗಳನ್ನು ವಿಸ್ತರಿಸಿ, ಮೇಲ್ದರ್ಜೆಗೇರಿಸಲು ರೂಪಿಸಿರುವ ನಿಯಮಗಳಿಂದ ರಸ್ತೆ ಪಕ್ಕದಲ್ಲಿನ ಜನ ಸಾಮಾನ್ಯರಿಗೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ತೀವ್ರ ಸಮಸ್ಯೆಗಳಾಗುತ್ತಿದ್ದು, ಕೂಡಲೇ ಈ ನಿಯಮಗಳನ್ನು ಬದಲಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸೇರಿದಂತೆ ವಿವಿಧ ರಸ್ತೆ ಕಾಮಗಾರಿ ಕೈಗೊಳ್ಳುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ […]

ನಾನು ಆ ರೀತಿಯ ಹೇಳಿಕೆ ನೀಡಿಲ್ಲ: ಉಡುಪಿಯಲ್ಲಿ ಪ್ರಣವಾನಂದ ಸ್ವಾಮೀಜಿ ಸ್ಪಷ್ಟನೆ

ಉಡುಪಿ: ಶರಣಬಸವೇಶ್ವರ ಮಠಾಧಿಪತಿ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಅಲ್ಪಸಂಖ್ಯಾತರಿಗೆ ಶೇಂದಿ ಮಾರಾಟ ಮಾಡಬಾರದೆಂದು ಹೇಳಿದ್ದಾರೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಬಿಸ್ತರಿಸಿವೆ. ಈ ಹೇಳಿಕೆಗೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಣವಾನಂದ ಶ್ರೀಗಳು, ಇದೊಂದು ಸತ್ಯಕ್ಕೆ ದೂರವಾದ ವಿಚಾರ. ನಾನು ಎಲ್ಲಿಯೂ ಅಂತಹ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಮೂರ್ತೆದಾರಿಕೆ ಮಾಡುವ ಜನಾಂಗಕ್ಕೆ ಸರ್ಕಾರದಿಂದ ಹೆಚ್ಚಿನ ಉತ್ತೇಜನ ಸಿಗಬೇಕು. ಶೇಂದಿ ಮಾರಾಟ ಕೇಂದ್ರ ತೆರಬೇಕು ಎಂದು ಹೇಳಿದ್ದೆ. ಆದರೆ ಅದನ್ನು ತಿರುಚಿ ಈ ರೀತಿಯ […]

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಸೇರಿದಂತೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.