ಮಲ್ಪೆ: ಸಮುದ್ರದಲ್ಲಿ ಮುಳುಗಿ ಯುವಕ ಸಾವು

ಮಲ್ಪೆ: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತನನ್ನು ಬೆಂಗಳೂರಿನ ನಿವಾಸಿ 28 ವರ್ಷದ ಸಾಮ್ರಾಟ್ ಎಂದು ಗುರುತಿಸಲಾಗಿದೆ. ಇವರು ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಡುಪಿ‌ ಬಂದಿದ್ದರು ಎನ್ನಲಾಗಿದೆ. ಇಂದು ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿದಿದ್ದು, ಈ ವೇಳೆ ಸಮುದ್ರದ ಅಲೆಯ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು […]

ಗುಣಾತ್ಮಕ ಶಿಕ್ಷಣ ನೀಡಿ ಸ್ಫೂರ್ತಿಯ ದಾರಿ ತೋರಿಸೋ ಹೆಮ್ಮಾಡಿಯ ‘ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು’

ಕುಂದಾಪುರ: ಯುವ ಪೀಳಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನ ವೇಗದೊಂದಿಗೆ ಹೆಜ್ಜೆಯಿರಿಸಲು, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಬಹುಮುಖ್ಯ. ಕಾಲದ ಅವಶ್ಯಕತೆಯನ್ನು ಅರಿತು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿಯೊಂದಿಗೆ, ರೂಪುಗೊಂಡ ದಕ್ಷ ತಂಡ ಈ ವರ್ಷದಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಎಂಬ ಸಂಸ್ಥೆಯ ಮೂಲಕ ಜೊತೆ ಸೇರಿದೆ. ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಜನತಾ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನಿಂದ ಸಮರ್ಪಣಾ ಎಜುಕೇಶನ್ […]

ಪೋಷಣ್ ಪಕ್ವಾಡ ಸಮಾರೋಪ ಕಾರ್ಯಕ್ರಮ

ಉಡುಪಿ: ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠವಾದ ಮಕ್ಕಳು ದೇಶದ ಆಸ್ತಿ. ಗರ್ಭಿಣಿ ಬಾಣಂತಿ ಹಾಗೂ ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಸೋಮವಾರ, ಆತ್ರಾಡಿ ಗ್ರಾಮ ಪಂಚಾಯತ್‌ನ ಹೆಚ್. ಮಹೀಮ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, […]

ಅಸಮಾನತೆ ನಿವಾರಣೆಗಾಗಿ ಡಾ. ಬಾಬು ಜಗಜೀವನ್ ರಾಂ ಹೋರಾಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಸಮಾಜದದಲ್ಲಿನ ವಿವಿಧ ಜಾತಿ ಮತ್ತು ವರ್ಗಗಳ ನಡುವಿನ ಅಸಮಾನತೆಯನ್ನು ತೊಡೆದು ಹಾಕಿ ಸಮಾನತೆಯನ್ನು ಮೂಡಿಸುವಲ್ಲಿ ಡಾ. ಬಾಬು ಜಗಜೀವನ ರಾಂ ಅವಿರತವಾಗಿ ಶ್ರಮಿಸಿದ್ದರು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ಪ.ಜಾತಿ ಮತ್ತು ಪ.ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ದಿನಾಚರಣೆ […]

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಾರಂಭಿಸಲು ಸಾಧ್ಯವಿಲ್ಲ: ಸಚಿವ ಮುರುಗೇಶ್ ನಿರಾಣಿ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಗಾಗಿ ಕಬ್ಬು ಬೆಳೆಸುತ್ತಿದ್ದ ಭೂಮಿಯನ್ನು ಪರಿವರ್ತನೆ ಮಾಡಿ ಅಡಿಕೆ ಬೆಳೆಸಲಾಗುತ್ತಿದೆ. ಉಳಿದ ಭಾಗಕ್ಕೆ ಹೋಲಿಕೆ ಮಾಡಿದರೆ ಇಲ್ಲಿ ಬೆಳೆದ ಕಬ್ಬಿನಲ್ಲಿ ಸಕ್ಕರೆ ಬರುವುದು ಕಡಿಮೆ. ಆದುದರಿಂದ ಈಗಾಗಲೇ ಮುಚ್ಚಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಮತ್ತೆ ಸಕ್ಕರೆ ಕಾರ್ಖಾನೆಯಾಗಿ ಪುನಾರಂಭಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯ ಬೃಹತ್ ಹಾಗೂ ಮಾಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇಂದ್ರಾಳಿಯಲ್ಲಿರುವ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ […]