ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗೆ 14 ಕೋಟಿ ಲಾಭ: ಯಶ್‍ಪಾಲ್ ಎ. ಸುವರ್ಣ

ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2021-22ನೇ ಸಾಲಿನಲ್ಲಿ ರೂ. 641.22 ಕೋಟಿ ವ್ಯವಹಾರ ನಡೆಸಿ ರೂ. 14 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ  ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ 2021-22ನೇ ಸಾಲಿನಲ್ಲಿ 368 ಕೋಟಿ ಠೇವಣಿ, […]

ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಮನೆಯಿಂದ ಹೊರಗೆ ಹೋದ ಮಹಿಳೆಯೊಬ್ಬರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಹೊಸೂರು ಗ್ರಾಮದ 28 ವರ್ಷದ ನಿವಾಸಿ ರೇವತಿ ನಾಪತ್ತೆಯಾದ ಮಹಿಳೆ. ಇವರು ಮಾ.27ರ ರಾತ್ರಿಯಿಂದ ಮಾ.28ರ ಬೆಳಿಗ್ಗೆ 6.30ರ ಮಧ್ಯಾವಧಿಯಲ್ಲಿ ಮನೆಯಿಂದ ಹೊರಗೆ ಹೋದವರು ವಾಪಾಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಮನೆಯವರು ಎಲ್ಲ ಕಡೆ ಹುಡುಕಾಟ ನಡೆಸಿದರೂ ಈವರೆಗೂ ರೇವತಿ ಪತ್ತೆಯಾಗಿಲ್ಲ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ರಸ್ತೆ ಸುರಕ್ಷತೆ ಅಡಿಯಲ್ಲಿ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  Udupi.nic.in ಅಥವಾ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ರಾಜ್ಯದ ಜನತೆಗೆ ಕರೆಂಟ್ ಶಾಕ್: ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ.!

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ […]

ಬಾಲ ಗೌರವ ಪ್ರಶಸ್ತಿ: ಅವಧಿ ವಿಸ್ತರಣೆ

ಉಡುಪಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 18 ರ ವರೆಗೆ ವಿಸ್ತರಿಸಲಾಗಿದೆ. ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ […]