ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆ

ಉಡುಪಿ: ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಪೂರ್ವಭಾವಿ ಸಭೆ ಏ.06 ರಂದು ನಡೆಯಿತು. ಮುಖ್ಯಮಂತ್ರಿಗಳು ಏಪ್ರಿಲ್ 11 ರಂದು ಬೆಳಗ್ಗೆ 12 ಗಂಟೆಗೆ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2.30 ಕ್ಕೆ ಉಡುಪಿಯಲ್ಲಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದು, ಗ್ರಂಥಾಲಯದಲ್ಲಿ […]

ರಸ್ತೆಗಳ ಬ್ಲಾಕ್‌ಸ್ಪಾಟ್‌ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲಾಕ್‌ಸ್ಪಾಟ್‌ಗಳನ್ನು ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ […]

ಆಟೋರಿಕ್ಷಾಗಳಿಗೆ ವಲಯ ಸ್ಟಿಕ್ಕರ್ ಅಳವಡಿಕೆ ಕಡ್ಡಾಯ

ಉಡುಪಿ: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ನಿರ್ಣಯದಂತೆ ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಹಾಗೂ ಮಾಲಕರು ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳುವಂತೆ ಈಗಾಗಲೇ ಹಲವು ಬಾರಿ ಸೂಚನೆ ನೀಡಲಾಗಿದ್ದು, ವಲಯ ಸ್ಟಿಕ್ಕರ್ ಅಳವಡಿಸಲು ಬಾಕಿ ಇರುವ ಆಟೋರಿಕ್ಷಾ ಮಾಲಕರು ವಾಹನದ ಮೂಲ ದಾಖಲೆಗಳೊಂದಿಗೆ ಕಚೇರಿಗೆ ಹಾಜರಾಗಿ ಕೂಡಲೇ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ದಂಡ ವಿಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು, ಮಾಹಿತಿಯನ್ನು ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ […]

ದೇವರ ದಾಸಿಮಯ್ಯ ಜಯಂತಿ ಆಚರಣೆ

ಉಡುಪಿ: ಮಠದೊಳಗಣ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯಿತು ಕಾಣಾ ರಾಮನಾಥ ಎಂಬ ಜೇಡರ ದಾಸಿಮಯ್ಯರ ವಚನದಂತೆ ಮಾನವನು ಅರಿಷಡ್ವರ್ಗಗಳ ಆಸೆಗೆ ಒಳಗಾದರೆ ಹೀನ ಸ್ಥಿತಿಗೆ ತಲುಪುತ್ತಾನೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಇದರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ದೇವರ ದಾಸಿಮಯ್ಯ ಪ್ರಪ್ರಥಮ ವಚನಕಾರರಾಗಿದ್ದು, ವಿಶ್ವ ಸಾಹಿತ್ಯಕ್ಕೆ […]

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಗಬೆಟ್ಟು ಕೊರಂಗ್ರಪಾಡಿ ನಿವಾಸಿ ಮಂಜಳಾ (20) ಎಂಬ ಯುವತಿಯು ಏಪ್ರಿಲ್ 4 ರಂದು ಸಂಜೆ 5.30 ರ ಸುಮಾರಿಗೆ ಯಾರಿಗೂ ಹೇಳದೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 9 ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಉದ್ದನೆಯ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ […]