ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೊರಕಾಣಿಕೆ ಸಮರ್ಪಣೆ

ಉಡುಪಿ: ಸಗ್ರಿ ಶ್ರೀವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ನವೀಕೃತ ಶ್ರೀನಾಗದೇವರ ಗುಡಿ ಸಮರ್ಪಣೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಹೊರೆಕಾಣಿಕೆ ಮೆರವಣಿಗೆ ಗುರುವಾರ ಅದ್ಧೂರಿಯಾಗಿ ನಡೆಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಉಡುಪಿ ಶ್ರೀಕೃಷ್ಣಮಠದಲ್ಲಿ ಮೆರವಣಿಗೆಗೆ ಚಾಲನೆ ನೀಡಿದರು.ಬಳಿಕ ಕೃಷ್ಣಮಠದ ರಾಜಾಂಗಣದಿಂದ ಆರಂಭಗೊಂಡ ವೈಭವದ ಮೆರವಣಿಗೆ ಸಗ್ರಿ ದೇಗುಲಕ್ಕೆ ತಲುಪಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೊಂಬು, ಕಹಳೆ, ಚೆಂಡೆ, ಬ್ಯಾಂಡ್ ಮೆರಗು ಹೆಚ್ಚಿಸಿತ್ತು. ನಾಡಡೋಲು, ಬಿರುದಾವಳಿ, ಘಟೋದ್ಗಜ, ಸ್ವರ್ಣಕಲಶ, ಶಂಖನಾದ, ಜಾಗಂಟೆ, ಪೂರ್ಣಕುಂಭ, ತಟ್ಟಿರಾಯ, ಮುಖವಾಡ, ಕೀಲು […]

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶದ ವಾರ್ಡ್ಗಳ ಪಟ್ಟಿ ಮಾಡಿಕೊಂಡು, ಆ ಪ್ರದೇಶಗಳಲ್ಲಿ ಈ […]

ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ: ಡಾ. ವಿಜಯ ಬಲ್ಲಾಳ್

ಉಡುಪಿ: ಉತ್ತಮ ಆಹಾರ ಪದ್ಧತಿ ಮತ್ತು ಆಚಾರ ವಿಚಾರಗಳೇ ನಮ್ಮನ್ನು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುತ್ತದೆ. ಸಕಾರಾತ್ಮಕ ಆಲೋಚನೆಗಳೇ ಉತ್ತಮ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ತಿಳಿಸಿದರು. ಅವರು ಇಂದು ನಗರದ ರೆಡ್‌ಕ್ರಾಸ್ ಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯೋಗ, ಧ್ಯಾನ, ವ್ಯಾಯಾಮದಂತಹ ಸಕಾರಾತ್ಮಕ ಚಿಂತನೆ ಹಾಗೂ […]

ಮಲ್ಪೆ; ಸೈಂಟ್‌ ಮೇರಿಸ್‌ ದ್ವೀಪದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತ್ಯು

ಮಲ್ಪೆ: ಇಲ್ಲಿನ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಇಂದು ನಡೆದಿದೆ. ನೀರುಪಾಲಾದ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಅವರನ್ನು ಅಲೆನ್ ರೇಜಿ(22), ಅಮಲ್ ಸಿ ಅನಿಲ್ (22) ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ  ಅಂಟೋನಿ (21) ಎಂಬ ವಿದ್ಯಾರ್ಥಿಗಾಗಿ ಶೋಧ ಮುಂದುವರಿದಿದೆ. ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ 42 ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರನ್ನೊಳಗೊಂಡ ತಂಡ ಇಂದು ಮಲ್ಪೆಯ ಸೈಂಟ್ ಮೇರಿಸ್ […]

ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ ಅಧ್ಯಯನಕ್ಕೆ ಚಿಂತನೆ; ಪ್ರಧಾನಿ ಮೋದಿ

ನವದೆಹಲಿ: ವಿಶ್ವದಾದ್ಯಂತ ಏ.7ರ ದಿನವನ್ನು ಆರೋಗ್ಯ ದಿನವನ್ನಾಗಿ ಆಚರಿಸುವ ಪ್ರಯುಕ್ತ, ಪ್ರಧಾನಿ ನರೇಂದ್ರ ಮೋದಿ ಅವರು ವೈದ್ಯಕೀಯ ಕ್ಷೇತ್ರದಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ಶುಭ ಹಾರೈಸಿದರು. ಹಾಗೆಯೇ ಈ ಬಾರಿ ದೇಶದಲ್ಲಿ `ನಮ್ಮ ಆರೋಗ್ಯ ನಮ್ಮ ಗ್ರಹ’ ಘೋಷವಾಕ್ಯದೊಂದಿಗೆ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಕಳೆದ 8 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆಯಾಗಿದ್ದು, ಹಲವಾರು ಹೊಸ ವೈದ್ಯಕೀಯ ಕಾಲೇಜುಗಳು ತಲೆಎತ್ತಿದೆ. ಸ್ಥಳೀಯ ಭಾಷೆಗಳಲ್ಲೇ ವೈದ್ಯಕೀಯ ಅಧ್ಯಯನವನ್ನು ಸಕ್ರಿಯಗೊಳಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದು ಅಸಂಖ್ಯಾತ […]