ಬೈಕಾಡಿ ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಆಯೋಜಿಸಿದ್ದ “ರಂಗೋತ್ಸವ” ಕಾರ್ಯಕ್ರಮ ಉದ್ಘಾಟನೆ
ಬ್ರಹ್ಮಾವರ: ಮಂದಾರ(ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿನಗರ- ಬೈಕಾಡಿಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಆಯೋಜಿಸಿದ್ದ “ರಂಗೋತ್ಸವ” ಕಾರ್ಯಕ್ರಮವು ಎ.8 ರಂದು ನಾದ ಮಣಿನಾಲ್ಕೂರು ಅವರ ಅರಿವಿನ ಹಾಡುಗಳೊಂದಿಗೆ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಮನೋವೈದ್ಯರಾದ ಡಾ.ಪಿ.ವಿ ಭಂಡಾರಿಯವರು ನಾಟಕವೂ ಕೂಡ ಒಂದು ಮನೋಚಿಕಿತ್ಸೆಯೇ ಆಗಿದೆ ಮತ್ತು ಅದು ಶಿಸ್ತು ಹಾಗೂ ಬದ್ಧತೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮತ್ತೋರ್ವ […]
ಉಡುಪಿ: ಯುವಕ ನೇಣಿಗೆ ಶರಣು
ಉಡುಪಿ: ಫ್ಯಾನಿಗೆ ನೇಣುಬಿಗಿದುಕೊಂಡು ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ವಾದಿರಾಜ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ವಾದಿರಾಜ ರಸ್ತೆಯ ನಿವಾಸಿ 24 ವರ್ಷದ ಮಹೇಶ್ ಭಟ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಗರ ಪೋಲಿಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಜೀವನ್ ಕೂಮಾರ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು […]
ಎ.10ರಂದು 16 ವರ್ಷದೊಳಗಿನ ಮಕ್ಕಳಿಗೆ ಮುನಿಯಾಲು ಸ್ವರ್ಣಪ್ರಾಶನ ಲಸಿಕೆ
ಮಣಿಪಾಲ: ಮಕ್ಕಳ ಸ್ವಾಸ್ಥ್ಯರಕ್ಷಣೆ ಹಾಗೂ ವ್ಯಾಧಿಕ್ಷಮತೆಯ ಅಭಿವೃದ್ಧಿಗಾಗಿ ಮುನಿಯಾಲು ಆಯುರ್ವೇದ ಸಂಶೋಧನಾ ಸಂಸ್ಥೆಯಿಂದ ವಿಶೇಷವಾಗಿ ಸಂಶೋಧಿಸಲ್ಪಟ್ಟ ಹಿರಣ್ಯಪ್ರಾಶದ ಬಿಂದುಗಳನ್ನು 16 ವರ್ಷಗಳೊಳಗಿನ ಮಕ್ಕಳಿಗೆ ಈ ತಿಂಗಳ ಪುಷ್ಯ ನಕ್ಷತ್ರವಾದ ಏಪ್ರಿಲ್ 10, 2022ರಂದು ನೀಡಲಾಗುತ್ತಿದೆ. ಈ ಕಾರ್ಯಕ್ರಮ ಸಾಕಷ್ಟು ಜನಪ್ರಿಯವಾಗುತ್ತಿದ್ದು, ಹೆಚ್ಚು ಹೆಚ್ಚು ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯವಂತರಾಗಬೇಕೆಂಬ ಸದುದ್ದೇಶದಿಂದ ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮುನಿಯಾಲು ಆಯುರ್ವೇದ ಕುಟುಂಬ ಚಿಕಿತ್ಸಾಲಯದ ಶಾಖೆಗಳಾದ ಉಡುಪಿಯ ಅಜ್ಜರಕಾಡು, ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಮುಖ್ಯ ರಸ್ತೆಯ […]
ಮಣಿಪಾಲ: ಎಂಐಸಿಯ 19ನೇ ಆವೃತ್ತಿಯ ‘ನಮ್ಮ ಅಂಗಡಿ’ ಉದ್ಘಾಟನೆ
ಮಣಿಪಾಲ: ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ ನಮ್ಮ ಅಂಗಡಿಯ ಉದ್ಘಾಟನೆ ಮಾರ್ಚ್ 8 ರಂದು ಎಂಐಸಿ ಕ್ಯಾಂಪಸ್‌ನಲ್ಲಿ ನಡೆಯಿತು. ಸಮಾರಂಭವನ್ನು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾರಾವ್ ಎಂ, ಐಎಎಸ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕೂರ್ಮಾ ರಾವ್, ಕಳೆದ 19 ವರ್ಷಗಳಿಂದ ಇಂತಹ ಉದಾತ್ತ ಉದ್ದೇಶವನ್ನು ಕೈಗೊಂಡಿರುವ ಸಂಸ್ಥೆ ಮತ್ತು ನಮ್ಮ ಭೂಮಿಯೊಂದಿಗೆ ಅವರ ಒಡನಾಟವನ್ನು ಅಭಿನಂದಿಸಿದರು. ಅಂತಹ ಕಾರಣಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂವಹನ ವಿಭಾಗವು […]
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- 2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ- 35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು […]