ಕುಂದಾಪುರ: ಆಸ್ತಿ ತೆರಿಗೆ ಪಾವತಿಗೆ ಸೂಚನೆ
ಉಡುಪಿ: ಕುಂದಾಪುರ ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ. ಜೂನ್ 30 ರ ವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 ರ ದಂಡವನ್ನು ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಏ. 30 ರ ಒಳಗೆ ಆಸ್ತಿ […]
ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಎ.11ರಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ತರಬೇತಿ ಶಿಬಿರ
ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ, ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆರೋಗ್ಯ ರಕ್ಷಣೆ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಎಪ್ರಿಲ್ 11ರಿಂದ ಬೆಳಿಗ್ಗೆ 5.00ರಿಂದ 6.30ರ ವರೆಗೆ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗಳು ನಡೆಯಲಿವೆ. ಎಪ್ರಿಲ್ 10 ರವಿವಾರ ಬೆಳಿಗ್ಗೆ 10.00ಕ್ಕೆ ಉಚಿತ ಯೋಗ ಶಿಕ್ಷಣ […]