ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಕೊಡಿ: ಸಿಎಂಗೆ ಡಾ.ಪಿ.ವಿ.ಭಂಡಾರಿ ಮನವಿ ಸಲ್ಲಿಕೆ

ಮಣಿಪಾಲ: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಬೇಕು ಎಂಬುದು ಬಹುದಿನಗಳ ಬೇಡಿಕೆ. ಈ ನಿಟ್ಟಿನಲ್ಲಿ ಕರಾವಳಿ ಯೂತ್ ಕ್ಲಬ್ ಖ್ಯಾತ ಮನೋವೈದ್ಯ ಡಾ. ಪಿ.ವಿ ಭಂಡಾರಿ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದೆ. ಇವತ್ತು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭೇಟಿಯಾದ ಡಾ. ಪಿ ವಿ ಭಂಡಾರಿ ನೇತೃತ್ವದ ತಂಡವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆ ಮಾಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪಿಪಿಪಿ ಮಾದರಿಯ ಮೆಡಿಕಲ್ ಕಾಲೇಜಿಗೆ ಒಲವು ತೋರಿದ್ದಾರೆ. ಸರಕಾರಿ ಮೆಡಿಕಲ್ […]

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ

ಉಡುಪಿ ಶ್ರೀಕೃಷ್ಣಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿ ದೇವರ ಆಶೀರ್ವಾದ ಪಡೆದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಪೂರ್ಣಕುಂಭದೊಂದಿಗೆ ಸಿಎಂರನ್ನು ಸ್ವಾಗತಿಸಲಾಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಶಾಸಕರಾದ ಲಾಲಾಜಿ ಮೆಂಡನ್, ಕರಾವಳಿ ಪ್ರಾಧಿಕಾರದ ಮಟ್ಟಾರ್ ರತ್ನಾಕರ ಹೆಗ್ಡೆ,ಬಿಜೆಪಿ […]

ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ […]

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಶಿರೂರು ರೈಲ್ವೆ ನಿಲ್ದಾಣದ ರೈಲ್ವೆ ಹಳಿಯ ಮೇಲೆ ಏಪ್ರಿಲ್ 3 ರಂದು ಸುಮಾರು 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿರುತ್ತದೆ. ಮೃತರ ವಾರಿಸುದಾರರ ಯಾರಾದರೂ ಇದ್ದಲ್ಲಿ ಪೊಲೀಸ್ ಉಪ ನಿರೀಕ್ಷಕರು, ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ : 08254- 251033 ಅಥವಾ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ವೃತ್ತ ದೂ.ಸಂಖ್ಯೆ: 08254- 251031 ಅನ್ನು ಸಂಪರ್ಕಿಸುವಂತೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಈ ವರ್ಷ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಶ್ರೀ ಕ್ಷೇತ್ರ ಉಚ್ಚಿಲ ಇವರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ರಾಜೀವ್ ಗಾಂದಿ ವಸತಿ ಯೋಜನೆಯಡಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಿಸಲಾಗುವುದು. ಮೀನುಗಾರರ 8 […]