ಎ.17: ಆರೋಗ್ಯ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಎನ್.ಸಿ.ಡಿ ವಿಭಾಗ, ಪ್ರೆಸ್ ಕ್ಲಬ್, ವೈದ್ಯಕೀಯ ಪ್ರಕೋಷ್ಠ, ಭಾರತೀಯ ವೈದ್ಯಕೀಯ ಮಂಡಳಿ ಹಾಗೂ ರೋಟರಿ ಕ್ಲಬ್ ಉಡುಪಿ, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾವು ಏಪ್ರಿಲ್ 17 ರಂದು ಬೆಳಗ್ಗೆ 6.30 ಕ್ಕೆ ಅಜ್ಜರಕಾಡಿನಿಂದ ಆರಂಭಗೊಂಡು, ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿಯಿಂದ ಉಡುಪಿ ನಗರವನ್ನು ಪ್ರವೇಶಿಸಿ, ಬೋರ್ಡ್ ಹೈಸ್ಕೂಲ್ ಆವರಣದವರೆಗೆ ನಡೆಯಲಿದೆ. ಜಾಥಾದಲ್ಲಿ ಭಾಗವಹಿಸುವವರು ತಮ್ಮ […]

ದ್ವಿತೀಯ ಪಿಯು ಪರೀಕ್ಷೆಯನ್ನು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ನಡೆಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ಯಾವುದೇ ಗೊಂದಲಗಳಿಗೊಳಗಾಗದಂತೆ ಪರೀಕ್ಷೆಯನ್ನು ಬರೆಯುವ ಅವಕಾಶ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ್ವಿತೀಯ ಪಿಯು ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲೆಯ 28 […]

ಉಡುಪಿ: ಡೆತ್ ನೋಟ್ ನಲ್ಲಿ ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ

ಉಡುಪಿ: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ 40 ಪರ್ಸೆಂಟ್​​ ಕಮಿಷನ್​ ಆರೋಪ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಕೆಎಸ್‌ಆರ್‌ಟಿಸಿ ಸಮೀಪದ ಶಾಂಭವಿ ಹೋಟೆಲ್‌ನ ರೂಮ್‌ವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. 40 ಕಮಿಷನ್ ಆರೋಪ ಮಾಡಿ ತನ್ನ ಊರು ತೊರೆದಿದ್ದ‌‌ರು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರು. ಮಂಗಳವಾರ ಬೆಳಗ್ಗೆ ಅವರ ಮೊಬೈಲ್ ಲೋಕಷನ್ ಉಡುಪಿಯಲ್ಲಿ […]

ಕುಂದಾಪುರ: ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು […]

ಹಿರಿಯಡಕ ನವ್ಯೋದಯ ಫ್ರೆಂಡ್ಸ್ ಕ್ಲಬ್ ನ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಹಿರಿಯಡಕ: ಎರಡು ವರುಷಗಳ ಹಿಂದೆ ಮರಳು ಶೇಖರಣೆಯಿಂದ ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದ್ದ ಹಿರಿಯಡ್ಕದ ಗಾಂಧಿ ಮೈದಾನದಲ್ಲಿ ಹಲವು ವರುಷಗಳ ನಂತರ ಪುನಃ ಕ್ರೀಡೆಗಳೆಗೆ ಚಾಲನೆ ಸಿಕ್ಕಂತಾಗಿದೆ. ನವ್ಯೋದಯ ಫ್ರೆಂಡ್ಸ್ ಕ್ಲಬ್ ಹಿರಿಯಡಕ ಇವರ ಆಶ್ರಯದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಡುಪಿ ಇವರುಗಳ ಸಹಕಾರದೊಂದಿಗೆ ಇಂದು ವಾಲಿಬಾಲ್ ಪಂದ್ಯಾಟದ ಉದ್ಘಾಟನೆಗೊಂಡಿತು. ಈ ಪಂದ್ಯಾಟವನ್ನು ದಿನೇಶ್ ಮೆಂಡನ್ – ಜಿಲ್ಲಾ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಇವರು ಉದ್ಘಾಟಿಸಿ ಶುಭ […]