ಇನ್ಮುಂದೆ ಇದನ್ನು ಹೊಂದಿಲ್ಲದಿದ್ದರೆ ದ್ವಿಚಕ್ರ ಸವಾರರಿಗೆ ಭಾರೀ ದಂಡ ಬೀಳುವುದು ಗ್ಯಾರಂಟಿ.!

ಬೆಂಗಳೂರು: ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೊದರೆ 500 ರೂ. ದಂಡ ಫಿಕ್ಸ್ ಆಗಿದೆ. ಈ ಕುರಿತು ಮಾಹಿತಿ ನೀಡಿರುವ ಜಂಟಿ ಆಯುಕ್ತ (ಸಂಚಾರ) ಡಾ.ಬಿ.ಆರ್. ರವಿಕಾಂತೇಗೌಡ, ಸಂಭವಿಸುತ್ತಿರುವ ಅಪಘತಗಳಲ್ಲಿ ಹೆಚ್ಚಿನದಾಗಿ ದ್ಚಿಚಕ್ರ ವಾಹನಗಳೇ ತುತ್ತಾಗುತ್ತಿದೆ. ಮರಣ ಪ್ರಮಾಣದಲ್ಲಿ ಸಹ ದ್ವಿಚಕ್ರ ಸವಾರರ ಸಾವಿನ ಪ್ರಮಾಣವೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಗಳಿಗೆ 2 ಕಡೆ ಮಿರರ್ […]

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಪೆಟ್) ಪ್ರಸಕ್ತ ಸಾಲಿನ ಉದ್ಯೋಗಾದಾರಿತ ಡಿಪ್ಲೊಮಾ, ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ & ಟೆಸ್ಟಿಂಗ್ ಕೋರ್ಸ್ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ.(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ […]

ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಮುಕ್ತ ಶಾಲೆ- ಕೆ.ಓ.ಎಸ್ ಪರೀಕ್ಷೆಗಳು ಏಪ್ರಿಲ್ 18 ರಿಂದ 27 ರ ವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇಲ್ಲಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗದಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. […]

ದ್ವಿತೀಯ ಪಿ.ಯು.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2022 ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18 ರ ವರೆಗೆ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 […]