ಹಿರಿಯಡಕ ರಥೋತ್ಸವದ ಮೆರವಣಿಗೆಯ ಸುಂದರ ಚಿತ್ರಗಳು
ಹಿರಿಯಡ್ಕ: ಹಿರಿಯಡ್ಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ರಥೋತ್ಸವ ಮೆರವಣಿಗೆಯು ಎ.19 ರಂದು ಅದ್ದೂರಿಯಾಗಿ ನಡೆಯಿತು. ಹಿರಿಯಡ್ಕ ಶಬರಿ ಸ್ಟುಡಿಯೋ ಕ್ಲಿಕ್ಕಿಸಿದ ಸುಂದರವಾದ ರಥೋತ್ಸವ ಮೆರವಣಿಗೆಯ ಚಿತ್ರಗಳು..
ಉಡುಪಿ ಶ್ರೀ ಕೃಷ್ಣಮಠಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ
ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಎ.19 ರಂದು ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಉಡುಪಿ ಜಿಲ್ಲಾ ಬಿ.ಜೆ.ಪಿ.ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಕಾಪು ಶಾಸಕರಾದ ಲಾಲಾಜಿ ಮೆಂಡನ್, ಮುಖಂಡರಾದ ಉದಯಕುಮಾರ್ ಶೆಟ್ಟಿ, ಮಠದ ದಿವಾನರಾದ ವರದರಾಜ ಆಚಾರ್, ಪರ್ಯಾಯ ಸಮಿತಿಯ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಚುನಾವಣಾ ಸಿದ್ಧತೆ: ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಪುನರಪಿ ಗೆಲ್ಲುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಕುಲಗಳ ಮತ್ತು ವಿವಿಧ ಕಾರ್ಯಕ್ರಮಗಳ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಗೆ ವಿವಿಧ […]
ವಿಶ್ವ ಯಕೃತ್ತಿನ ದಿನ 2022 ರ ಪ್ರಯುಕ್ತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಕೃತ್ತಿನ ಜಾಗೃತಿ ಕಾರ್ಯಕ್ರಮ
ಮಣಿಪಾಲ: ಯಕೃತ್ತಿನ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 19 ರಂದು ವಿಶ್ವ ಯಕೃತ್ತು ದಿನವನ್ನು ಆಚರಿಸಲಾಗುತ್ತದೆ. ಯಕೃತ್ತು, ಮೆದುಳಿನ ನಂತರ ದೇಹದಲ್ಲಿ ಎರಡನೇ ಅತಿದೊಡ್ಡ ಮತ್ತು ಎರಡನೇ ಅತ್ಯಂತ ಸಂಕೀರ್ಣವಾದ ಅಂಗವಾಗಿದೆ. ಯಕೃತ್ತು ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿ, ಚಯಾಪಚಯ ಮತ್ತು ದೇಹದೊಳಗೆ ಪೋಷಕಾಂಶಗಳ ಸಂಗ್ರಹಣೆಗೆ ಸಂಬಂಧಿಸಿದ ಅನೇಕ ನಿರ್ಣಾಯಕ ಕಾರ್ಯಗಳನ್ನು ನಿರ್ವಹಿಸುತ್ತದೆ. ಯಕೃತ್ತು ಮತ್ತು ಅದರ ರೋಗಗಳ ಬಗ್ಗೆ ಅರಿವು ಮೂಡಿಸಲು, ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗ, ಕಸ್ತೂರ್ಬಾ ಆಸ್ಪತ್ರೆ, […]
ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಮಹೋತ್ಸವ ಸಂಪನ್ನ
ಪಡುಬಿದ್ರಿ: ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವಾರ್ಷಿಕ ಶ್ರೀ ಮನ್ಮಹಾರಥೋತ್ಸವು ಏಪ್ರಿಲ್ 19 ರಂದು ಸಂಪನ್ನಗೊಂಡಿತು. ಬೆಳಿಗ್ಗೆ ರಥಾರೋಹಣ, ಬಳಿಕ ಮಹಾ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ ರಥೋತ್ಸವ, ಉತ್ಸವ ಬಲಿ, ಮಹಾರಂಗಪೂಜೆ, ಶ್ರೀ ಭೂತಬಲಿ, ಶಯನೋತ್ಸವ ನಡೆಯಿತು. ಪರ್ಯಾಯ ತಂತ್ರಿ ವೇ.ಮೂ. ಬೆಟ್ಟಿಗೆ ವೆಂಕಟರಾಜ ತಂತ್ರಿ ಅವರ ಮಾರ್ಗದರ್ಶನದಲ್ಲಿ ಸರದಿ ಅರ್ಚಕರಾದ ವೇ.ಮೂ. ಶ್ರೀನಿವಾಸ ಭಟ್, ವೇ.ಮೂ. ವೆಂಕಟೇಶ ಭಟ್, ವೇ.ಮೂ. ಗುರುರಾಜ ಭಟ್ ಅವರ ಅರ್ಚಕತ್ವದಲ್ಲಿ ಪವಿತ್ರಪಾಣಿ ಕೆ.ಎಲ್. ಕುಂಡಂತಾಯ ಅವರ […]