ದೇಶದ ಬೆಳವಣಿಗೆಯಲ್ಲಿ ಐ.ಟಿ.ಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಅಂಡಾರು ದೇವಿ ಪ್ರಸಾದ್ ಶೆಟ್ಟಿ

ಉಡುಪಿ: ದೇಶದ ಬೆಳವಣಿಗೆಗೆ ಕೈಗಾರಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ಐ.ಟಿ.ಐ ತರಬೇತಿ ಹೊಂದಿದ ವಿದ್ಯಾರ್ಥಿಗಳ ಭಾಗೀದಾರಿಕೆ ಉಲ್ಲೇಖನೀಯವಾದುದು ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಇಂದು ಮಣಿಪಾಲ ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಡುಪಿ ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ […]

ಮಂಗಳೂರು ವಿವಿಯ ಪದವಿ ಪರೀಕ್ಷೆ: ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಪ್ರಥಮ ರ‍್ಯಾಂಕ್, ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್

ಉಡುಪಿ: ಮಂಗಳೂರು ವಿ.ವಿ.ಯ 2020- 21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ‍್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಬ್ರಹ್ಮಾವರ: ಮಕ್ಕಳನ್ನು ಅಂಕಕ್ಕೆ ಸಮೀತಗೊಳಿಸದೆ, ಅವರಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಸಮಾಜಮುಖಿ ಉದ್ದೇಶ ಬೆಳೆಸಬೇಕು. ಪ್ರಾಮಾಣಿಕ, ಸಾತ್ವಿಕ ಜೀವನದಿಂದ ಸಾರ್ಥಕ ಬದುಕು ಸಾಧ್ಯತೆ ಇದೆ ಎಂದು ಶ್ರೀ ಛಲವಾದಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಬಸವನಾಗಿ ದೇವ ಸ್ವಾಮೀಜಿ ಹೇಳಿದರು. ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಆಡಳಿತ ಮಂಡಳಿ ಧರ್ಮದರ್ಶಿ ಗೋಕುಲ್‍ದಾಸ್ ಬಾರಕೂರು ಮಾತನಾಡಿ, ದೇವಸ್ಥಾನದ ಚಾಕರಿಗೆ ಮಾತ್ರ […]

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಸೇವೆ ನೀಡಿ: ಸುಮಿತ್ರಾ ನಾಯಕ್

ಉಡುಪಿ: ಸರ್ಕಾರಿ ನೌಕರರು ಸರಕಾರದ ಎಲ್ಲಾ ಸೇವೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತೆ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹಾಗೂ 2021 ಮತ್ತು 22 ನೇ ಸಾಲಿನ ಜಿಲ್ಲಾ ಮಟ್ಟದ […]

ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನ: ವಿಜೃಂಭಣೆಯ ಶ್ರೀ ಮನ್ಮಹಾರಥೋತ್ಸವ

ಬ್ರಹ್ಮಾವರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಶ್ರೀ ಮನ್ಮಹಾರಥೋತ್ಸವ ಬುಧವಾರ ವಿಜೃಂಭಣೆಯಿಂದ  ನಡೆಯಿತು. ವಾದ್ಯಘೋಷಗಳು, ತಾಲೀಮು ಪ್ರದರ್ಶನ, ತಟ್ಟಿರಾಯ ಮುಂತಾದ ವಿಶೇಷತೆಗಳು ಉತ್ಸವಕ್ಕೆ ಮೆರಗು ತಂದಿದೆ. ರಥೋತ್ಸವ ಮೆರವಣಿಗೆಯ ನಂತರ ವಿಶೇಷ ಸುಡುಮದ್ದಿನ ಪ್ರದರ್ಶನವನ್ನು ಜಾತ್ರೆಯ ಮೆರುಗನ್ನು ಹೆಚ್ಚಿಸಿತು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್. ರಘುರಾಮ ಮಧ್ಯಸ್ಥ, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಸದಸ್ಯರಾದ ಎನ್. ಚಂದ್ರಶೇಖರ ಅಡಿಗ, ಎನ್. ಕೃಷ್ಣ ಅಡಿಗ, ಎನ್. ರಾಘವೇಂದ್ರ ಅಡಿಗ, […]