ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ

ಮಣಿಪಾಲ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಪ್ರತಿ ಗುರುವಾರ ಪೂರ್ವಾಹ್ನ 9.00ರಿಂದ ಅಪರಾಹ್ನ 5.00 ಘಂಟೆಯ ವರೆಗೆ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್‍ ಕಾರ್ಡ್ ಹೊಂದಿದವರಿಗೆ ಸಕ್ಕರೆ ಕಾಯಿಲೆ, ಬೊಜ್ಜುತನ ಮುಂತಾದ ಜೀವನಶೈಲಿ ಕಾಯಿಲೆಗಳು, ಶ್ವಾಸಕೋಶದ ತೊಂದರೆಗಳು, ಚರ್ಮ ರೋಗಗಳು, ಜೀರ್ಣಾಂಗದ ಸಮಸ್ಯೆಗಳು, ಸಂಧಿವಾತ, ನರದೌರ್ಬಲ್ಯ, ಮುಟ್ಟಿನ ಸಮಸ್ಯೆಗಳು, ರಕ್ತಹೀನತೆ, ಕೂದಲುದುರುವಿಕೆ, ಗುದನಾಳದ ಸಮಸ್ಯೆಗಳು, ಇತರ ಕಾಯಿಲೆಗಳಿಗೆ ಹೊರರೋಗಿ ವಿಭಾಗದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುವುದು. ಸಾರ್ವಜನಿಕರು ಇದರ […]

ಮಾಜಿ ಸೈನಿಕರಿಗೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪ ನಿರ್ದೇಶಕರ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಎಸ್,ಎಸ್.ಎಲ್.ಸಿ ಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಸಿಸಿದ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪದವಿಧರ, ಮೇಜರ್ ಅಥವಾ ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ‍್ಯಾಂಕ್‌ಗಳಿಂದ ತೇರ್ಗಡೆಯಾದ ನಿವೃತ್ತ ಸೈನಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ, ಸೈನಿಕ ಕಲ್ಯಾಣ ಮತ್ತು  ಪುನರ್ವಸತಿ ಇಲಾಖೆ, ಮಂಗಳೂರು ಕಛೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಈ […]

ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡಕ್ಕೆ 1.47 ಕೋಟಿ, ಕಾರ್ಕಳ ತಾಲೂಕು ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ 20 ಲಕ್ಷ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಹೊಸದಾಗಿ ರಚನೆಗೊಂಡ ಹೆಬ್ರಿ ತಾಲೂಕಿಗೆ ಪೂರ್ಣ ಪ್ರಮಾಣದ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕಾರ್ಯಗತಗೊಳಿಸಿದೆ. ನೂತನ ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ರೂ. 1.47 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಬ್ರಿ ತಾಲೂಕು ಪಂಚಾಯತ್ ಈಗ ಹೆಬ್ರಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸ್ವಂತ ಕಟ್ಟಡ ಅತೀ ಶೀಘ್ರ ಮಾಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ರವರ ವಿಶೇಷ ಪ್ರಯತ್ನದಿಂದಾಗಿ ಇದೀಗ ಅನುದಾನ […]

ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ

ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭ ಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಎ.20 ರಂದು ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ‌ ನಡೆಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, […]