ಶ್ರೀಕೃಷ್ಣಮಠದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ನೃತ್ಯ ವಿದುಷಿ ಮಂಜರಿಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಘಶ್ರೀ ಇವರಿಂದ ನೃತ್ಯಾಭಿವಂದನ ಅಂಗವಾಗಿ ಭರತನಾಟ್ಯ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ಕಲಾವಿದರಾದ ಕೋಟ ಭಗವತ್ ಭಜನಾ ತಂಡದಿಂದ ಕೋಲಾಟ ನೃತ್ಯ ಮತ್ತು ಉದಯಾಸ್ತಮಾನ ಭಜನಾ ಕಾರ್ಯಕ್ರಮಗಳು ನಡೆದವು.
ಆಚಾರ್ಯಾಸ್ ಏಸ್ : ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ
9-10 ನೇ ತರಗತಿ, ಪಿಯುಸಿ, ಸಿಇಟಿ, ಜೆಇಇ, ನೀಟ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತಿರುವ ಉಡುಪಿಯ ಏಸ್ ವತಿಯಿಂದ ಮೇ ಮೊದಲ ವಾರದಿಂದ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಲಾಗಿದೆ. ಮೇ 6ನೇ ತಾರೀಖಿನಿಂದ ಪ್ರತೀ ಶನಿವಾರ ಅಪರಾಹ್ನ 4 ರಿಂದ 6 ರ ವರೆಗೆ ಮತ್ತು ಭಾನುವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ತರಬೇತಿ ನೀಡಲಾಗುತ್ತದೆ. ಕಳೆದ 7 ವರ್ಷಗಳಿಂದ ಪರಿಣಾಮಕಾರಿ ತರಬೇತಿ ಮೂಲಕ ಸಾವಿರಕ್ಕೂ ಮಿಕ್ಕಿ […]
ನಗರಸಭಾಧ್ಯಕ್ಷರಿಂದ ಮಲೇರಿಯಾ ನಿಯಂತ್ರಣ ಜನಜಾಗೃತಿ ಜಾಥಾಕ್ಕೆ ಚಾಲನೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಮತ್ತು ಪೌರಾಡಳಿತದ ಸಹಯೋಗದಲ್ಲಿ “ವಿಶ್ವ ಮಲೇರಿಯಾ ದಿನ” ದ ಅಂಗವಾಗಿ, ಮದರ್ ಆಫ್ ಸಾರೋಸ್ ಚರ್ಚ್ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ಆವರಣದವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಮದರ್ ಆಫ್ ಸಾರೋಸ್ ಚರ್ಚಿನ ಫಾದರ್, ಜಿಲ್ಲಾ ರೋಗವಾಹಕ […]
ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ
ಉಡುಪಿ: ಕೇಂದ್ರ ಸರ್ಕಾರದ ‘ಆಜಾದಿ ಕಾ ಅಮೃತ ಮಹೋತ್ಸವ್’ ಕಾರ್ಯಕ್ರಮದ ಆಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ. ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ […]
ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ: ಮಳೆಯಿಂದಾಗುವ ಅತಿವೃಷ್ಟಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಾಗುವ ಯಾವುದೇ ರೀತಿಯ ನೈಸರ್ಗಿಕ ಅವಘಡಗಳು ಮತ್ತು ಅವುಗಳ ಅಡ್ಡ ಪರಿಣಾಮಗಳಿಗೆ ಸ್ಥಳೀಯ ಸಾರ್ವಜನಿಕರು […]