ಪಿಎಸ್ಐ ಪರೀಕ್ಷೆ ಅಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ
ಉಡುಪಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತನ್ನ ಬಳಿ ಇದ್ದ ಆಡಿಯೋವನ್ನು ವಿಳಂಬವಾಗಿ ಬಿಡುಗಡೆ ಮಾಡಿದ ಮರ್ಮ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಸಿಐಡಿ ವಿಶೇಷ ಘಟಕಕ್ಕೆ ಸಹಕರಿಸದಿದ್ದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಸದ್ರಿ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿದೆ. […]
ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ, ಶೀಘ್ರದಲ್ಲೇ ಬಾಲಿವುಡ್ಗೆ ಪಾದಾರ್ಪಣೆ?
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಸೆಲೆಬ್ರಿಟಿ. ಸ್ಟಾರ್ ಕಿಡ್, ಆದಾಗ್ಯೂ ನಟನೆಯನ್ನು ವೃತ್ತಿಯಾಗಿ ತೆಗೆದುಕೊಳ್ಳಲು ಆಸಕ್ತಿ ಹೊಂದಿದ್ದಾರೆ ಮತ್ತು ಬಾಲಿವುಡ್ಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತದೆ. ಸಾರಾ ಈ ಹಿಂದೆ ಬ್ರ್ಯಾಂಡ್ ಎಂಡಾರ್ಸ್ಮೆಂಟ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಲೈಫ್ನ ಮೂಲದ ಪ್ರಕಾರ, ಸಾರಾ ಶೀಘ್ರದಲ್ಲೇ ನಟನೆಗೆ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ ಮತ್ತು ಆಕೆಯ ಪೋಷಕರು ಆಕೆಯ ಜೀವನದ ಆಯ್ಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. “ಸಾರಾ […]
ಅಧ್ಯಯನ ಕೇಂದ್ರವಾಗಲಿರುವ ಸೈಂಟ್ ಮೇರೀಸ್ ದ್ವೀಪ
ಉಡುಪಿ: ಮಲ್ಪೆಯ ಸೈಂಟ್ ಮೇರೀಸ್ ದ್ವೀಪವನ್ನು ಅಧ್ಯಯನ ಕೇಂದ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಚಿಂತನೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಸೈಂಟ್ ಮೇರೀಸ್ ದ್ವೀಪವನ್ನು ಕೇವಲ ಪ್ರವಾಸಿ ತಾಣವೆಂದು ಬಗೆಯದೆ, ಎಲ್ಲರಿಗೂ ಪ್ರಯೋಜನವಾಗುವ ನಿಟ್ಟಿನಲ್ಲಿ ಅದನ್ನು ಅಧ್ಯಯನ ಕೇಂದ್ರವಾಗಿ ಮಾರ್ಪಡಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು. ದ್ವೀಪದಲ್ಲಿ ನಡೆಯುತ್ತಿರುವ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉಪ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಸ್ಥಳ ಪರಿಶೀಲನೆ […]
ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳ ಜೀರ್ಣೋದ್ಧಾರ: ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ
ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ, ಪದ್ಮವಿಭೂಷಣ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ರೂ. 25 ಲಕ್ಷ ದೇಣಿಗೆ ನೀಡಿದ್ದಾರೆ. ಸೋಮವಾರದಂದು ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ದೇಣಿಗೆಯ ಚೆಕ್ ಅನ್ನು ಹೆಗ್ಗಡೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ […]
ಸಿಡಿಲು ಬಡಿದು ಯುವಕ ಮೃತ್ಯು
ಕಾರ್ಕಳ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೂರಾಲ್ ಬೆಟ್ಟು ಗ್ರಾಮದಲ್ಲಿ ಸೋಮವಾರ ನಡೆದಿದೆ. ನೂರಾಲ್ ಬೆಟ್ಟುವಿನ ಜಾಣಮನೆ ನಿವಾಸಿ 41 ವರ್ಷದ ಜಿಗೀಶ್ ಜೈನ್ ಮೃತ ದುರ್ದೈವಿ. ಜಿಗೀಶ್ ಮನೆಯಲ್ಲಿ ಇದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಸಿಡಿಲಿನ ಹೊಡೆತಕ್ಕೆ ಜಿಗೀಶ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.