ಏ.29: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ: ಶಾಂತಾ ಎಲೆಕ್ಟ್ರಿಕಲ್ಸ್ ಮತ್ತು ಇಂಜಿನಿರ್ಸ್ ಪ್ರೈ.ಲಿ, ಶ್ರೀ ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಏಪ್ರಿಲ್ 29 ರಂದು ಬೆಳಗ್ಗೆ 9.45 ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐ.ಟಿ.ಐ ಡಿಪ್ಲೋಮಾ, ಬಿ.ಎ, ಬಿ.ಎಡ್, ಎನ್.ಟಿ.ಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡಿನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. […]

ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ […]

ಕಾಪುವಿನ ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್

ಗೋವಾ: ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಕಾಪುವಿನ ಇಬ್ಬರು ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿ ಪ್ರದಾನ ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯಿತು. ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು […]

ನಗರಸಭೆ- ಸಾಮಾನ್ಯ ಸಭೆ

ಉಡುಪಿ: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ಎಪ್ರಿಲ್ 28 ರಂದು ಬೆಳಗ್ಗೆ 10.30 ಕ್ಕೆ ಕಚೇರಿಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಡೆಂಗ್ಯೂ ನಿಯಂತ್ರಣಕ್ಕೆ ವಿಶೇಷ ಅಭಿಯಾನ ನಡೆಸಿ: ಕೂರ್ಮಾರಾವ್

ಉಡುಪಿ: ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ಗ್ರಾಮಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಮೂರು ದಿನಗಳ ವಿಶೇಷ ಡೆಂಗ್ಯೂ ನಿಯಂತ್ರಣ ಅಭಿಯಾನ ನಡೆಸಿ, ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ಗ್ರಾಮಗಳ ಡೆಂಗ್ಯೂ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ನಿಯಂತ್ರಣಾ ಕ್ರಮಗಳ […]