ರಸ್ತೆ ಅಪಘಾತ: ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ಗಾಯಗೊಳಿಸಿದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಅಕ್ಟೋಬರ್ 05 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಳ್ಳಿ ಗ್ರಾಮದ ಕಲ್ಸಂಕ ಗುಂಡಿಬೈಲು ಬಳಿ ಮರ್ವಿನ್ ವಿಲ್ಫ್ರೆಡ್ ಡಿಸೋಜಾ ಎಂಬಾತನು ಬೈಕನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ದೊಡ್ಡಣಗುಡ್ಡೆ ಕಡೆಗೆ ತೆರಳಲು ದ್ವಿಚಕ್ರ ವಾಹನವನ್ನು ತಿರುಗಿಸುತ್ತಿದ್ದ ಪ್ರಕಾಶ ಶೆಟ್ಟಿಯವರ ಟಿ.ವಿ.ಎಸ್ ಜುಪಿಟರಿನ ಬಲಬದಿಗೆ ಢಿಕ್ಕಿ ಹೊಡೆದ […]

ಅಪಘಾತದಿಂದ ಸಾವು: ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ, ಹಿಂಬದಿ ಕುಳಿತಿದ್ದ ಮಹಿಳೆಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಅಕ್ಟೋಬರ್ 21 ರಂದು ಸಂಜೆ 5.15 ರ ಸುಮಾರಿಗೆ ಪ್ರತಾಪ ಸುದರ್ಶನ ಶೆಟ್ಟಿ ಎಂಬಾತನು ಜಯಲಕ್ಷಿ ಎಂಬ ಮಹಿಳೆಯನ್ನು ಬೈಕಿನ ಹಿಂಬದಿ ಕೂರಿಸಿಕೊಂಡು, ಅತಿವೇಗ, ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸುತ್ತಿದ್ದಾಗ, ಉಡುಪಿ ತಾಲೂಕು ಪುತ್ತೂರು ಗ್ರಾಮದ ರೊಬೋಸಾಫ್ಟ್ ಟೆಕ್ನಾಲಜೀಸ್ […]

ಏಪ್ರಿಲ್ 30 ರಂದು ನವೋದಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ನವೋದಯ ವಿದ್ಯಾಲಯ ಸಂಸ್ಥೆಯ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಯು ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 30 ರಂದು ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ […]

ಹವಾಮಾನ ವೈಪರೀತ್ಯ: ಪ್ರತಿದಿನದ ಮಾಹಿತಿಗಾಗಿ ವೆಬ್ಸೈಟ್ ನೋಡಿ

ಉಡುಪಿ: ಪೂರ್ವ ಮಾನ್ಸೂನ್ ಮಳೆಯು ಈಗಾಗಲೇ ಪ್ರಾರಂಭವಾಗಿದ್ದು, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಗಳಲ್ಲಿ ಈ ಅವಧಿಯಲ್ಲಿ ಚಂಡಮಾರುತಗಳು ಬೀಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಅತಿಯಾದ ಮಳೆ ಹಾಗೂ ಜೋರಾದ ಗಾಳಿ ಭೂಮಿಯ ಕಡೆಗೆ ಬೀಸುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರತಿದಿನದ ಮುನ್ಸೂಚನೆಯ ಮಾಹಿತಿಗಳನ್ನು mausam.imd.gov.in/bengaluru ನಲ್ಲಿ ಪಡೆಯಬಹುದಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ: ಕೂರ್ಮಾರಾವ್

ಉಡುಪಿ: ಪ್ರಸ್ತುತ ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಮತ್ತು ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ, ಕಾರ್ಯನಿರ್ವಹಿಸುವ ಸ್ಥಳಗಳು ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಜೊತೆಗೆ ಸಾರ್ವಜನಿಕ […]