ವರ್ಗಾವಣೆಗೊಂಡ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕಿ ಶೃತಿ ಬೀಳ್ಕೊಡಿಗೆ

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಪಕ್ಷದ ಮುಖಂಡರು ಹಾಜರಿದ್ದರು. ಗೌರವ ಸ್ವೀಕರಿಸಿ ಮಾತನಾಡಿದ ಶೃತಿ, ಜಿಲ್ಲೆಯು ಶಾಂತಿಪ್ರಿಯವಾಗಿದ್ದು ಇಲ್ಲಿ ಸುಮಾರು ಮೂರು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಿಂದೂ-ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವುದು ಹೆಮ್ಮೆ ತಂದಿದೆ ಎಂದರು. ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಪೊಲೀಸ್ ಅಧೀಕ್ಷಕಿ ಶೃತಿ […]

ಸೂಡ: 2,500 ವರ್ಷಗಳಷ್ಟು ಹಳೆಯ ಬೃಹತ್ ಶಿಲಾಯುಗದ ಕಲ್ಲುಬಂಡೆ ಗುಹೆ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಬೃಹತ್ ಶಿಲಾಯುಗದ ಗುಹೆ ಪತ್ತೆಯಾಗಿದೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ಅರ್ಧಗೋಳದ ಕುಹರವನ್ನು ಲ್ಯಾಟರೈಟ್ ಮಣ್ಣಿನಲ್ಲಿ ಸುಮಾರು 2 ಅಡಿ ವ್ಯಾಸ ಮತ್ತು 1 ಮೀಟರ್ ಉದ್ದದ ಕುತ್ತಿಗೆಯ ಸುತ್ತಿನ ತೆರೆಯುವಿಕೆಯೊಂದಿಗೆ ಕತ್ತರಿಸಲಾಗಿದೆ. ಇದು ಗ್ರಾನೈಟ್ ಚಪ್ಪಡಿಯಿಂದ ಮುಚ್ಚಲ್ಪಟ್ಟಿತ್ತು ಮತ್ತು ಸಡಿಲವಾದ ಮಣ್ಣಿನಿಂದ ತುಂಬಿದ್ದ […]

ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ಶಾಖೆಯ ಉದ್ಘಾಟನೆ, ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ

ಮಣಿಪಾಲ: ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ನೂತನ ಶಾಖೆಯು ಇದೇ ಬರುವ ಮೇ 2ರಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಇದು ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆಯಾಗಿದ್ದು, ಆರ್‌ಟಿಜಿಎಸ್, ನೆಫ್ಟ್, ಎಟಿಎಂ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯವನ್ನು ಒಳಗೊಂಡಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 2ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ […]