ಉಡುಪಿ: ಕರ್ತವ್ಯಕ್ಕೆ ಮರಳಿದ ದಿನವೆ ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೆಬಲ್
ಉಡುಪಿ: ಕರ್ತವ್ಯದ ವೇಳೆ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೆಬಲ್ ರಾಜೇಶ್ ಕುಂದರ್ ಅಮಾನತುಗೊಂಡ ಬಳಿಕ ಮತ್ತೆ ಕೆಲಸಕ್ಕೆ ಸೇರಿದ್ದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ರಾಜೇಶ್ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದರು. ಇವರು ಆದಿ ಉಡುಪಿಯ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸ್ಟೋರ್ ರೂಮಿನ ಹೊರಗೆ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಇತರ ಸಿಬ್ಬಂದಿಗಳು […]
ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕದಿಂದ ಕಾರ್ಯಕ್ರಮ
ಮುನಿಯಾಲು: ಗುರುವಾರದಂದು ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು, ಯುನಿಸೆಫ್ ಸಹಭಾಗಿತ್ವದಲ್ಲಿ ‘ಆರೋಗ್ಯ ಮತ್ತು ಪೌಷ್ಟಿಕ ಸೇವೆಗಳನ್ನು ಪಡೆಯಲು ಸಮುದಾಯಗಳಲ್ಲಿ ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಗಾಗಿ ಎನ್. ಎಸ್. ಎಸ್. ಸ್ವಯಂ ಸೇವಕರ ತೊಡಗಿಸಿಕೊಳ್ಳುವಿಕೆ ಯೋಜನೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಡಾ. ಸುದೀಪ ಇವರು ಎನ್. ಎಸ್. ಎಸ್. ಮಹತ್ವ ಮತ್ತು ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ವಿವರಿಸಿದರು. […]
ಪಿ.ಎಸ್.ಐ ಪರೀಕ್ಷೆ ನೇಮಕಾತಿ ರದ್ದು, ಮರು ಪರೀಕ್ಷೆಗೆ ತೀರ್ಮಾನ
ಬೆಂಗಳೂರು: 545 ಪಿ.ಎಸ್.ಐ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷಾ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆರೋಪಿಗಳನ್ನು ಹೊರತುಪಡಿಸಿ, ಉಳಿದವರಿಗೆ ಶೀಘ್ರವೇ ಮರು ಪರೀಕ್ಷೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಇದಲ್ಲದೆ ಇನ್ನಿತರ ಆರೋಪಿಗಳಾದ ಅರ್ಚನಾ, ದಿವ್ಯಾ, ಚಾಲಕ ಸದ್ದಾಂ, ಸುನಂದಾರನ್ನು ಪುಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇವರೆಲ್ಲರನ್ನೂ ರಾಜ್ಯಕ್ಕೆ ಕರೆತರಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ಅವ್ಯವಹಾರ ನಡೆದಿರುವುದು […]
ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ವಾರ್ಷಿಕೋತ್ಸವ – ಓಪಸ್ ಲೈಟ್- 22.
ಮಣಿಪಾಲ: ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ವಿದ್ಯಾರ್ಥಿ ಪರಿಷತ್ತು, ಎರಡು ವರ್ಷಗಳ ಬಳಿಕ ವಿದ್ಯಾರ್ಥಿಗಳು ಕ್ಯಾಂಪಸ್ಗೆ ಹಿಂತಿರುಗುತ್ತಿರುವುದನ್ನು ಸಂಭ್ರಮಿಸಲು ತನ್ನ ವಾರ್ಷಿಕೋತ್ಸವ ಓಪಸ್ ಲೈಟ್- 2022 ಆಯೋಜಿಸಿತ್ತು. ವಾರ್ಷಿಕೋತ್ಸವವನ್ನು ಏಪ್ರಿಲ್ 23 ರ ಶನಿವಾರದಂದು ಸಂಜೆ 6 ಗಂಟೆಗೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ 900 ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಅಂಡ್ ಪ್ಲಾನಿಂಗ್ ನ ನಿರ್ದೇಶಕಿ ಡಾ. ನಂದಿನೇನಿ ರಮಾದೇವಿ, […]
ಮೇ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಂಕರಾಚಾರ್ಯ ಜಯಂತಿ
ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ