ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಉಡುಪಿ: ಕರ್ತವ್ಯ ನಿರತ ಮುಖ್ಯ ಪೇದೆಯೊಬ್ಬರು ತನ್ನ ಬಳಿಯಿದ್ದ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಾಜೇಶ್ ಕುಂದರ್ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡ ವ್ಯಕ್ತಿ. ಇವರು ಆದಿ ಉಡುಪಿಯ ಶಾಲೆಯೊಂದರ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಕೊಠಡಿಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದರು. ಅವಳಿ-ಜವಳಿ ಮಕ್ಕಳ ತಂದೆಯಾಗಿರುವ ರಾಜೇಶ್ ಕುಂದರ್, ರಾತ್ರಿ ವೇಳೆಯಲ್ಲಿ ಹಣೆಯ ಭಾಗಕ್ಕೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು […]
ಮೇ 3 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ
ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವ ಜಯಂತಿ ಆಚರಣೆಯು ಮೇ 3 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾಮೂಹಿಕ ಸರಳ ವಿವಾಹ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಸಲ್ಲಿಸಿ, ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಚೇರಿಗೆ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು […]
ಮೇ 20 ರಂದು ಅಲೆವೂರು ಗ್ರಾಮ ಪಂಚಾಯತ್ ಖಾಲಿ ಸ್ಥಾನಕ್ಕೆ ಚುನಾವಣೆ
ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿಯ ಅಲೆವೂರು ಗ್ರಾಮ ಪಂಚಾಯತ್ ನ 1 ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮೇ 5 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಮೇ 11 ರಂದು ನಾಮಪತ್ರಗಳ ಪರಿಶೀಲನೆ, ಮೇ 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 20 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆ ನಡೆಯಲಿದೆ. ಮೇ 22 ರಂದು […]
ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್
ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶರ್ಮಿಳಾ. ಎಸ್ ಹೇಳಿದರು. ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ […]