ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿ ಸಾವು : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಅತೀ ವೇಗ, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ, ಅಪಘಾತಪಡಿಸಿ, ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 09 ರಂದು ಬೆಳಗ್ಗೆ 5.20 ಸುಮಾರಿಗೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆ ಹೈವೆ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಭಾಕರ ಎಂಬಾತನು ಕೆನರಾ ಟೂರಿಸ್ಟ್ ಬಸ್ಸನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ನಾಗರಾಜ ಎಂಬಾತನಿಗೆ ಢಿಕ್ಕಿ ಹೊಡೆದ […]

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮನನೊಂದು ಮಹಿಳೆ ನೇಣಿಗೆ ಶರಣು

ಬೈಂದೂರು: ಗ್ಯಾಸ್ಟ್ರಿಕ್  ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ‌ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಎ.29 ರಂದು ಸಂಜೆ ನಡೆದಿದೆ. ಯಡ್ತರೆ ಗ್ರಾಮದ ನಿವಾಸಿ 36 ವರ್ಷದ ಶ್ರೀಲತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರು ಗ್ಯಾಸ್ಟ್ರಿಕ್  ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಆದರೆ, ಶ್ರೀಲತಾ ಅವರಿಗೆ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಮನನೊಂದು ನಿನ್ನೆ ಸಂಜೆ ಫ್ಯಾನ್ ಗೆ ಚೂಡಿದಾರ್ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ […]

ಬೈಂದೂರು: ಬಾವಿಗೆ ಬಿದ್ದು ವೃದ್ಧೆ ಸಾವು

ಬೈಂದೂರು: ಬಾವಿಯಲ್ಲಿ‌ ನೀರು ತೆಗೆಯುತ್ತಿರುವಾಗ ಆಯತಪ್ಪಿ ಬಾವಿಯೊಳಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಪಡುವರಿ ಗ್ರಾಮದಲ್ಲಿ ಎ. 29 ರಂದು ಮಧ್ಯಾಹ್ನ ನಡೆದಿದೆ. ಪಡುವರಿ ಗ್ರಾಮದ ನಿವಾಸಿ, 75 ವರ್ಷದ ಇಮಿಲಿಯಾ ನಜ್ರೇತ್ ಮೃತ ದುರ್ದೈವಿ. ಇವರು ನಿನ್ನೆ ಮಧ್ಯಾಹ್ನ ಮನೆಯ ಬಾವಿಯಿಂದ ನೀರನ್ನು ಸೇದುತ್ತಿದ್ದರು. ಈ ವೇಳೆ ಆಯತಪ್ಪಿ ಬಾವಿಯ ನೀರಿಗೆ ಬಿದ್ದಿದ್ದು, ಕೂಡಲೇ ಅವರನ್ನು ಪ್ರದೀಪ್ ಎಂಬವರು ಮೇಲಕ್ಕೆ ಎತ್ತಿದ್ದರು. ತಕ್ಷಣವೇ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಪರೀಕ್ಷಿಸಿದ […]

ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ: ಶೀಘ್ರ ಸ್ಪಂದಿಸಿ ನ್ಯಾಯ ಒದಗಿಸಿ ಎಂದ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಮಾಹಿತಿ ಅಥವಾ ದೂರುಗಳು ಬಂದಲ್ಲಿ ಅವುಗಳಿಗೆ ಕೂಡಲೇ ಸ್ಪಂದಿಸಿ, ಪೀಡಿತರಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನು ನೆರವನ್ನು ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ […]

ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಏಪ್ರಿಲ್ 30 ರಿಂದ ಮೇ 2 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 30 ರಂದು ಬೆಳಗ್ಗೆ 10 ಗಂಟೆಗೆ ಕುಂಟಲ್ಪಾಡಿಯಲ್ಲಿ, ಕಾರ್ಕಳ ಕುಂಟಲ್ಪಾಡಿ ರಸ್ತೆಗೆ ಗುದ್ದಲಿ ಪೂಜೆ, 11 ಕ್ಕೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಹೆಬ್ರಿ ಮತ್ತು ಮರ್ಣೆ ಮಹಾ ಶಕ್ತಿ ಕೇಂದ್ರ ಸಭೆ, ಮಧ್ಯಾಹ್ನ 2.30 ಕ್ಕೆ ಮಣಿಪಾಲ ಉದಯವಾಣಿ ಪ್ರೆಸ್‌ನಲ್ಲಿ ಸಂವಾದ ಕಾರ್ಯಕ್ರಮ, ಸಂಜೆ 4 […]