ಏರುತ್ತಿರುವ ಇಂಧನ ಬೆಲೆಗೆ ಕಡಿವಾಣ: ಮೆಥನಾಲ್ ಮಿಶ್ರಿತ ಪೆಟ್ರೋಲ್ ಎಂ 15 ಬಿಡುಗಡೆ

ದೆಹಲಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹೊಸ ಮಾದರಿಯ ಪೆಟ್ರೋಲ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಪ್ರಾಯೋಗಿಕ ಯೋಜನೆಯಾಗಿ ಆರಂಭಿಸಲಾಗಿರುವ ಹೊಸ ಮಾದರಿಯ ಈ ಪೆಟ್ರೋಲ್ ನಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಮೂಲಕ ಪೈಲಟ್ ಯೋಜನೆಯಾಗಿ ಶೇ. 15 ರಷ್ಟು ಮೆಥೆನಾಲ್ ಮಿಶ್ರಣವನ್ನು ಹೊಂದಿರುವ ಪೆಟ್ರೋಲ್ ‘ಎಂ 15’ ಅನ್ನು ಬಿಡುಗಡೆಮಾಡಲಾಗಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರು ಶನಿವಾರ […]

ರಾಜ್ಯ ಮಟ್ಟದ ಭಜನಾ ಕಮ್ಮಟ – ಗುರುವಂದನಾ ಕಾರ್ಯಕ್ರಮ

ಉಡುಪಿ: ಪರ್ಯಾಯ ಶ್ರೀ ಕ್ರಷ್ಣಾಪುರ ಮಠ ಉಡುಪಿ ಇದರ ಆಶ್ರಯದಲ್ಲಿ, ಶ್ರೀಮತಿ ಮೋಹಿನಿ ಭಟ್ ಮಂಜೇಶ್ವರ ಮತ್ತು ಶ್ರೀಮತಿ ಮಾಯಾ ಕಾಮತ್ ಈಶ್ವರ ನಗರ ಮಣಿಪಾಲ, ಶ್ರೀ ಮಹಾಮಾಯಾ ಭಜನಾ ಮಂಡಳಿ ಈಶ್ವರನಗರ ಮಣಿಪಾಲ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು, ಅಲೆವೂರು ಪರಿವರ್ತನಾ ಫೌಂಡೇಶನ್(ರಿ) ಮಣಿಪಾಲ ಇದರ ಸಹಯೋಗದೊಂದಿಗೆ ಆದಿತ್ಯವಾರದಂದು ಶ್ರೀಕೃಷ್ಣಮಠ ಆವರಣದ ರಾಜಾಂಗಣ ಜನಾರ್ದನತೀರ್ಥ ವೇದಿಕೆಯಲ್ಲಿ ರಾಜ್ಯ ಮಟ್ಟದ ಭಜನಾ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ದಿವಾನರಾದ ವರದರಾಜ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ […]