ಕಿನ್ನಿಗೋಳಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವಾರ್ಷಿಕೋತ್ಸವ ಸಮಾರಂಭ

ಕಿನ್ನಿಗೋಳಿ: ನಾವು ಹಿಂದೂಗಳಾಗಿ ಒಗ್ಗಟ್ಟಾದಾಗ ಮಾತ್ರ ಸಶಕ್ತ ಸಮಾಜದ ಏಳಿಗೆ ಸಾಧ್ಯ. ನಮ್ಮೊಳಗಿನ ಜಾತಿ – ಪಂಗಂಡಗಳು ಸಾಮೂಹಿಕ ಪ್ರಗತಿಗೆ ತೊಡಕಾಗಬಾರದು ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಹೇಳಿದರು. ಅವರು ಕಿನ್ನಿಗೋಳಿ ರಾಜರತ್ನಪುರ ಸರಾಫ್ ಅಣ್ಣಯ್ಯಾಚಾರ್ಯ ಸಭಾ ಭವನದಲ್ಲಿ ಕಿನ್ನಿಗೋಳಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶುಭಾಶಂಸನೆ ನೀಡಿ ಮಾತನಾಡಿದರು. ಆನೆಗುಂದಿ ವೇದ ಪಾಠಶಾಲೆಯ ಪವನ್ ಶರ್ಮ್ ಅನುಗ್ರಹ […]

ಗಂಡ ಹೆಂಡತಿ ಜಗಳ ಸಾವಿನಲ್ಲಿ‌ ಅಂತ್ಯ

ಕುಕ್ಕುಂದೂರು: ಗಂಡ ಹೆಂಡತಿಯ ಜಗಳವು ಹೆಂಡತಿಯ ಸಾವಿನಲ್ಲಿ ಅಂತ್ಯ ಕಂಡ ದಾರುಣ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಎಂಬಲ್ಲಿ ಮೇ 3 ರಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜೋಡುರಸ್ತೆಯ 28 ವರ್ಷದ ಶೋಭಾ ಎಂದು ಗುರುತಿಸಲಾಗಿದೆ. ಇವರ ಪತಿ ಲೋಕೇಶ್ ಎಂಬವರು ನಿನ್ನೆ ಬೆಳಿಗ್ಗೆ ಮದ್ಯಪಾನ ಮಾಡಿಕೊಂಡು ಬಂದು ಶೋಭಾ ಅವರ ಬಳಿ ಜಗಳವಾಡಿದ್ದರು. ಇದರಿಂದ ಮನನೊಂದ ಶೋಭಾ ಮನೆಯ ಕೋಣೆಗೆ ತೆರಳಿ ಚಿಲಕ ಹಾಕಿಕೊಂಡು ಮಾಡಿನ ಶೀಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ […]

ಜೂನ್ 1 ರಿಂದ ಜೂನ್ 10 ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿ: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ಜೂನ್ 1 ರಿಂದ ಜೂನ್ 10 ರ ತನಕ ನಡೆಸಲಾಗುವುದು ಎಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೂನ್ 1 ಮಧ್ಯಾಹ್ನ 4:00 ಗಂಟೆಗೆ ಉಡುಪಿ ಜೋಡುಕಟ್ಟೆಯಿಂದ ಬಿರುದಾವಳಿ, ಕೀಲುಕುದುರೆ ನಾಡಿನ ಸಾಂಸ್ಕೃತಿಕ ವಿವಿಧ ತಂಡಗಳೊಂದಿಗೆ ಬೃಹತ್ ಹೊರಕಾಣಿಕೆಯ ಮೆರವಣಿಗೆ ನಡೆಸಲಾಗುವುದು. ಜೂನ್ 2 ರಂದು ಬೆಳಿಗ್ಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಭಜನಾ ಮಂಡಳಿಗಳು ಮತ್ತು […]

ಪರ್ಕಳ: ‘ಕ್ಷೇಮ ಪಾಲಿ ಕ್ಲಿನಿಕ್’ ಉದ್ಘಾಟನೆ

ಉಡುಪಿ: ಪರ್ಕಳದ ಗೋಪಾಲ್ ಟವರ್ಸ್ ನಲ್ಲಿ “ಕ್ಷೇಮ ಪಾಲಿ ಕ್ಲಿನಿಕ್” ಉದ್ಘಾಟನೆಗೊಂಡಿತು. ಯೋಗ ಗುರು ಗಣಪತಿ ಜೋಯಿಷ್ ಕ್ಲಿನಿಕ್ ಉದ್ಘಾಟಿಸಿ ಶುಭಹಾರೈಸಿದರು. ಕ್ಷೇಮ ಪಾಲಿ ಕ್ಲಿನಿಕ್ ಮಾಲೀಕ ರಾಧಾಕೃಷ್ಣ ಕೆ.ಜಿ. ಉಪಸ್ಥಿತರಿದ್ದರು. ಉದ್ಘಾಟನೆಯ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಮಧುಮೇಹ ಹಾಗೂ ರಕ್ತ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ನೂರಾರು ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು. ದಿನೇಶ್ ಸಂತೆಕಟ್ಟೆ ಮತ್ತು ಬಳಗ ಇವರಿಂದ “ಸಂಗೀತ ರಸಮಂಜರಿ” ಕಾರ್ಯಕ್ರಮ ನಡೆಯಿತು. ಬಳಿಕ “ಕೃಷ್ಣಾರ್ಜುನ ಕಾಳಗ” ಯಕ್ಷಗಾನ ತಾಳಮದ್ದಲೆ ಪ್ರದರ್ಶನಗೊಂಡಿತು. ಡಾ. […]

ಒತ್ತುವರಿ ತಡೆಯಲು ಡ್ರೋನ್‌ಗಳ ಮೂಲಕ ಮುಜರಾಯಿ ಮತ್ತು ವಕ್ಫ್ ಆಸ್ತಿಗಳ ಸಮೀಕ್ಷೆ

ಬೆಂಗಳೂರು: ಇದೇ ಮೊದಲ ಬಾರಿಗೆ ಮುಜರಾಯಿ ಮತ್ತು ವಕ್ಫ್ ಆಸ್ತಿಗಳನ್ನು ಡ್ರೋನ್‌ಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಧಾರ್ಮಿಕ ಸಂಸ್ಥೆಗಳನ್ನು ಅತಿಕ್ರಮಣಗಳಿಂದ ರಕ್ಷಿಸಲು ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರದ ಆದೇಶದ ಪ್ರಕಾರ, ವಕ್ಫ್ ಆಸ್ತಿ ಸಮೀಕ್ಷೆಗಾಗಿ ಕರ್ನಾಟಕ ರಾಜ್ಯ ದೂರ ಸಂವೇದಿ ಅಪ್ಲಿಕೇಶನ್ ಕೇಂದ್ರ (KSRSAC) ಮೂಲಕ ಡ್ರೋನ್ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತದೆ. ಮುಜರಾಯಿ ದೇವಸ್ಥಾನಗಳನ್ನು ಕಂದಾಯ ಇಲಾಖೆ ಮೂಲಕ ಆಸ್ತಿ ಸಮೀಕ್ಷೆಯ ವ್ಯಾಪ್ತಿಗೆ ತರಲಾಗುವುದು. ವಕ್ಫ್ ಆಸ್ತಿಗಳ ಒಂದು ಹಂತದ ಸಮೀಕ್ಷೆ ನಡೆದಿದ್ದು, ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. […]