ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಂಐಟಿ ಕ್ಯಾಂಪಸ್ ಭೇಟಿಗೆ ಅವಕಾಶ

ಮಣಿಪಾಲ: ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು 11 ಮೇ 2022 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನ ಮತ್ತು ಎಂಐಟಿ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಆಚರಣೆಯ ಅಂಗವಾಗಿ, ಸಂಸ್ಥೆಯಲ್ಲಿರುವ ಸೌಲಭ್ಯಗಳ ಕುರಿತು ವೀಕ್ಷಿಸಲು ಮತ್ತು ತಂತ್ರಜ್ಞಾನ ಚಾಲಿತ ಕಲಿಕೆಯ ವಾತಾವರಣದಿಂದ ಪರಿಚಿತರಾಗಲು ಕ್ಯಾಂಪಸ್‌ಗೆ ಭೇಟಿ ನೀಡುವಂತೆ ಎಂಐಟಿ ಸಂಸ್ಥೆಯು ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತಿದೆ. ಯುವ ಉತ್ಸಾಹಿ ವಿದ್ಯಾರ್ಥಿಗಳು ತಂತ್ರಜ್ಞಾನ ಕೇಂದ್ರಿತ ಜಗತ್ತನ್ನ ಪರಿವೀಕ್ಷಿಸುತ್ತಾ ತಮ್ಮ ವೈಜ್ಞಾನಿಕ ಮನೋಭಾವವನ್ನು ಬೆಳಗಿಸಲು ಇದು ಒಂದು ಉತ್ತಮ ಅವಕಾಶವಾಗಿದೆ. 11 ನೇ ಮೇ […]

ಅಜಯ್ ದೇವಗನ್ v/s ಕಿಚ್ಚ ಸುದೀಪ್ ಭಾಷಾ ಯುದ್ದ: ಭಾಷಾ ವಿಭಜನೆ ಬೇಡ ಎಂದ ಸೋನು ನಿಗಮ್

ಹೊಸದಿಲ್ಲಿ: ರಾಷ್ಟ್ರ ಭಾಷೆಯಾಗಿ ಹಿಂದಿ ವಿವಾದದ ನಡುವೆಯೇ ಈ ವಿಷಯದ ಬಗ್ಗೆ ಗಾಯಕ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋನು ನಿಗಮ್‌ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬೀಸ್ಟ್ ಸ್ಟೂಡಿಯೋಸ್ ನ ಸ್ಥಾಪಕ ಮತ್ತು ಸಿಇಒ ಸುಶಾಂತ್ ಮೆಹ್ತಾ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಪ್ರತಿಕ್ರಿಯಿಸಲು ಕೇಳಿದಾಗ, ಗಾಯಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಸೋನು ನಿಗಮ್, “ನನ್ನ ಜ್ಞಾನದ ಪ್ರಕಾರ, ಭಾರತದ ಸಂವಿಧಾನದಲ್ಲಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬರೆಯಲಾಗಿಲ್ಲ, ನಾನು ಈ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸಿದ್ದೇನೆ. ಹಿಂದಿ […]

ಸದ್ಯಕ್ಕಿಲ್ಲ ಮುಖ್ಯಮಂತ್ರಿ ಬದಲಾವಣೆ: ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ?

ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಕಾರ್ಯತಂತ್ರದ ಬಗ್ಗೆ ಸೂಚನೆಯನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿ ಸದ್ಯಕ್ಕಂತೂ ಯಾವುದೇ ಫಲಿತಾಂಶವನ್ನು ನೀಡಿದಂತೆ ಕಾಣುತ್ತಿಲ್ಲ. ರಾಜ್ಯ ಬಿಜೆಪಿ ಕೋರ್ ಕಮಿಟಿ ಮತ್ತು ಪಕ್ಷದ ನಾಯಕರೊಂದಿಗೆ ನಿಗದಿಪಡಿಸಲಾಗಿದ್ದ ಸಭೆ ರದ್ದುಗೊಂಡಿರುವುದು ಬೊಮ್ಮಾಯಿ ಅವರೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎನ್ನುವ ಸೂಚನೆ ಎಂದು ಬಲ್ಲ ಮೂಲಗಳು ತಿಳಿಸುತ್ತಿವೆ. ಅಮಿತ್ ಶಾ ಅವರ ಬೆಂಗಳೂರು ಭೇಟಿ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಪುಟ […]

ಉಕ್ರೇನ್‌ನಲ್ಲಿ ತಕ್ಷಣದ ಕದನ ವಿರಾಮಕ್ಕೆ ಮನವಿ ಮಾಡಿದ್ದೇವೆ: ಪ್ರಧಾನಿ ಮೋದಿ

“ಉಕ್ರೇನ್‌ನಲ್ಲಿ ತಕ್ಷಣದ ಕದನ ವಿರಾಮ ಮತ್ತು ಸಮಸ್ಯೆಗೆ ಪರಿಹಾರಕ್ಕಾಗಿ ಸಂವಾದ ಮತ್ತು ಕಾರ್ಯತಂತ್ರದ ಹಾದಿಯನ್ನು ಹಿಡಿಯಲು ನಾವು ಮನವಿ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರನ್ನು ಭೇಟಿಯಾದರು. ಕೋಪನ್ ಹ್ಯಾಗನ್ ನಲ್ಲಿ ಉಭಯ ಸರ್ಕಾರಗಳು ಉದ್ದೇಶ ಪತ್ರಗಳು ಮತ್ತು ತಿಳುವಳಿಕೆ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡವು. ಈ ಸಭೆಯಲ್ಲಿ, ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಡೆನ್ಮಾರ್ಕ್ ಮತ್ತು ಇಡೀ ಯೂರೋಪಿಯನ್ ಒಕ್ಕೂಟವು ಉಕ್ರೇನ್ ಮೇಲೆ […]

ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ಸವಾರ ಮೃತ್ಯು

ಕಾರ್ಕಳ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕಾರ್ಕಳ ರೆಂಜಾಳ ನಿವಾಸಿ 63 ವರ್ಷದ ಅಜಿತ್ ಕುಮಾರ್ ಮೃತ ಬೈಕ್ ಸವಾರ. ಇವರು ಮೇ 2ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಕಸಬಾ ಗ್ರಾಮದ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಒಮ್ಮೇಲೆ ಬ್ರೇಕ್ ಹಾಕಿದ್ದರು‌. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಅಜಿತ್ ಗಂಭೀರ ಗಾಯಗೊಂಡಿದ್ದರು. […]