ಬಾಲಭವನ ಕಚೇರಿ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.25 ರಂದು ಮೆಗಾ ಲೋಕ್ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಜೂನ್ 25 ರಂದು ಇ-ಲೋಕ ಅದಾಲತ್/ ಮೆಗಾ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ […]
ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರ ವರೆಗೆ ವಿಸ್ತರಿಸಲಾಗಿದೆ. ಶುಲ್ಕ ವಿನಾಯಿತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ನವೀಕರಣ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ […]
ಮೇ 7 ರಂದು ದಿಶಾ ಸಭೆ

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಮೇ 7 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಶ್ರೀ ವಿಶ್ವೇಶತೀರ್ಥ ಸ್ಮರಣಾರ್ಥ ಸ್ಮೃತಿ ವನ: ಮೇ 7 ರಂದು ಭೂಮಿ ಪೂಜೆ

ಉಡುಪಿ:ಶ್ರೀ ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣಾರ್ಥ ಉಡುಪಿ ಜಿಲ್ಲೆಯ ನೀಲಾವರ ಗ್ರಾಮದಲ್ಲಿ (ಗೋಶಾಲೆ ಸಮೀಪ ) ನಿರ್ಮಾಣವಾಗಲಿರುವ ಸ್ಮೃತಿ ವನಕ್ಕೆ ಭೂಮಿ ಪೂಜಾ ಕಾರ್ಯಕ್ರಮವು ಇದೇ ಬರುವ ಮೇ 7 ನೇ ತಾರೀಖು ಶನಿವಾರ ಮುಂಜಾನೆ 9.30 ಕ್ಕೆ ನಡೆಯಲಿದೆ. ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದ್ದು ರಾಜ್ಯದ ಅರಣ್ಯ ಮಂತ್ರಿ ಶ್ರೀ ಉಮೇಶ ವಿ ಕತ್ತಿಯವರು ಮುಖ್ಯ ಅಭ್ಯಾಗತರಾಗಿ […]