ಪ್ರಮೋದ್‌ ಮಧ್ವರಾಜ್‌ ಬಿಜೆಪಿ ಸೇರ್ಪಡೆ; ವರಿಷ್ಠರ ನಿರ್ಧಾರವೆ ಅಂತಿಮ: ಕುಯಿಲಾಡಿ

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್, ಬಿಜೆಪಿ ಸೇರ್ಪಡೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದ್ದು ಇನ್ನು ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು, ಪ್ರಮೋದ್‌ ಪಕ್ಷ ಸೇರ್ಪಡೆಯಾಗಲು ಯಾವುದೇ ಹುದ್ದೆಯ ಷರತ್ತು ಹಾಕಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು. ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಪಕ್ಷದ ಸಿದ್ದಾಂತವನ್ನು ನಂಬಿ ಬರುವವರಿಗೆ ಪಕ್ಷದ ಬಾಗಿಲು ಯಾವತ್ತೂ ಮುಚ್ಚಿಲ್ಲ, ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು […]

ಏರುತ್ತಿರುವ ತಾಪಮಾನ: ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲವೆಂದ ಶಿಕ್ಷಣ ಸಚಿವ

ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನವು ದಿನೇ ದಿನೇ ಏರುತ್ತಿದ್ದು, ಅದಾಗ್ಯೂ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷದ ಆರಂಭವನ್ನು ಮುಂದೂಡುವ ಬಗ್ಗೆ ಪರಿಗಣಿಸುವಂತೆ ವಿಧಾನ ಪರಿಷತ್ತಿನ ಕೆಲವು ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ್ದಾರೆ. “ಸರ್ಕಾರದ ಮುಂದೆ ಅಂತಹ ಯಾವುದೇ […]

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 5 ಅಧಿಸೂಚಿತ ಸಂಸ್ಥೆಗಳಿಗೆ ಮರು ಪ್ರಕಟಣೆ ಮತ್ತು 10 ಹೊಸ ಅಧಿಸೂಚಿತ ಸಂಸ್ಥೆ ಹಾಗೂ ದೇವಸ್ಥಾನಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು  ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚಿತ ಮರು ಪ್ರಕಟಣೆಯ ಪ್ರವರ್ಗ ಸಿ ಸಂಸ್ಥೆಗಳು: ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ (ಮಹಿಳಾ 1 ಸ್ಥಾನಕ್ಕೆ), ಕಾಪು ತಾಲೂಕು ಕಟಪಾಡಿ ಏಣಗುಡ್ಡೆ ಚೊಕ್ಕಾಡಿ […]

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public, ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ. ಸಂಖ್ಯೆ: 0820-2574596, ಕಾರ್ಕಳ ದೂ. […]

ಸಾಹಿತ್ಯ ಕಮ್ಮಟ ನಡೆಸಲು ಅರ್ಜಿ ಆಹ್ವಾನ

ಉಡುಪಿ, ಮೇ 05 (ಕವಾ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಸಂತ ಸಾಹಿತ್ಯ ಅಧ್ಯಯನ ಶಿಬಿರ ಎಂಬ ರಾಜ್ಯ ಮಟ್ಟದ 5 ದಿನಗಳ ಕಮ್ಮಟ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://sahithyaacademy.karnataka.gov.in ಅನ್ನು ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.