ಅಜಾನ್‌ಗಾಗಿ ಧ್ವನಿವರ್ಧಕ ಬಳಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬದೌನ್‌ನಲ್ಲಿರುವ ಮಸೀದಿಯಲ್ಲಿ ಅಜಾನ್‌ಗಾಗಿ ಧ್ವನಿವರ್ಧಕಗಳ ಬಳಕೆಗೆ ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ ಎಂಬ ಕಾನೂನನ್ನು ಈಗ ಇತ್ಯರ್ಥಗೊಳಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ಅಜಾನ್ ಸಮಯದಲ್ಲಿ ಗ್ರಾಮದ ಮಸೀದಿಯಲ್ಲಿ ಧ್ವನಿವರ್ಧಕ / ಮೈಕ್ರೊಫೋನ್ ಬಳಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯನ್ನು ಬದೌನ್‌ನಲ್ಲಿರುವ ಬಿಸೌಲಿ ತಹಸಿಲ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ತಿರಸ್ಕರಿಸಿದ್ದಾರೆ ಎಂದು ಇರ್ಫಾನ್ ಎಂಬಾತ ಅರ್ಜಿ ಸಲ್ಲಿಸಿದ್ದರು. ಎಸ್‌ಡಿಎಂ ನೀಡಿದ […]
ಕಡಿಯಾಳಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಜೂನ್ 1 ರಿಂದ ಜೂನ್ 10 ತನಕ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಜಗನ್ಮಾತೆ ಶ್ರೀ ಮಹಿಷಮರ್ದಿನಿಗೆ ಆಮಂತ್ರಣ ಪತ್ರಿಕೆ ಸಮರ್ಪಣೆ ಗೊಳಿಸಿದ ನಂತರ ಡ್ರೋನ್ ಮೂಲಕ ವಿಶಿಷ್ಟವಾಗಿ ವೇದಿಕೆಗೆ ಆಗಮಿಸಿದ ಆಮಂತ್ರಣ ಪತ್ರಿಕೆಯನ್ನು ಉಡುಪಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ನಾಯಕ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗೇಶ್ ಹೆಗ್ಡೆ, ಬ್ರಹ್ಮ ಕಲಶೋತ್ಸವದ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಪಿ […]
ಮಾರುಕಟ್ಟೆಗೆ ಬರಲಿದೆ ಗೇರು ಹಣ್ಣಿನ ವೈನ್! ತಂತ್ರಜ್ಞಾನಕ್ಕೆ ಪೇಟೆಂಟ್ ಪಡೆದ ಎನ್‌ಐಟಿಕೆ ಅಧ್ಯಾಪಕ

ಸುರತ್ಕಲ್: ಸುರತ್ಕಲ್‌ನ ಎನ್‌ಐಟಿಕೆ ಅಧ್ಯಾಪಕರೊಬ್ಬರು ಗೇರು ಹಣ್ಣು ಮತ್ತು ಒಣದ್ರಾಕ್ಷಿಗಳನ್ನು ಬಳಸಿ ವೈನ್ ಉತ್ಪಾದಿಸಲು ಪೇಟೆಂಟ್ ಪಡೆದಿದ್ದಾರೆ. ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಸನ್ನ ಬೇಲೂರು ದೇವರಭಟ್ಟ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಪೇಟೆಂಟ್‌ಗೆ ‘ಗೋಡಂಬಿ ಸೇಬು ಮತ್ತು ಒಣದ್ರಾಕ್ಷಿಗಳಿಂದ ಆಲ್ಕೊಹಾಲ್ಯುಕ್ತ ಪಾನೀಯವನ್ನು ಉತ್ಪಾದಿಸುವ ಪ್ರಕ್ರಿಯೆ ಮತ್ತು ಅದರಿಂದ ಉತ್ಪತ್ತಿಯಾಗುವ ಆಲ್ಕೊಹಾಲ್ಯುಕ್ತ ಪಾನೀಯ’ ಎಂದು ಶೀರ್ಷಿಕೆ ನೀಡಲಾಗಿದೆ. 2012 ರಲ್ಲಿ ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಸಲಾಗಿತ್ತು ಮತ್ತು ಮೇ 4, 2022 ರಂದು ಪೇಟೆಂಟ್ ದೊರಕಿದೆ. ಡಾ ಬೇಲೂರ್ […]
ಪಿ.ಎಂ ಕಿಸಾನ್ ಯೋಜನೆ : ಇ-ಕೆವೈಸಿ ಕಡ್ಡಾಯ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ 31 ರ ಒಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಸಿದ ಕಾಂಕ್ರೀಟ್ ರಸ್ತೆ; ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು, ಸಂಪೂರ್ಣವಾಗಿ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.