ಜೂನ್ 1 ರಿಂದ ಆಯುಷ್ಮಾನ್ ಕಾರ್ಡ್ ಕಡ್ಡಾಯ

ಉಡುಪಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಜೂನ್ 1 ರಿಂದ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್ ಫಲಾನುಭವಿಗಳು AB-Ark Card ಅಥವಾ ಆಯುಷ್ಮಾನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೊಂದಿಗೆ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ನಾಗರಿಕ ಸೇವಾ ಕೇಂದ್ರಗಳಾದ ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ […]
ಶಂಕರಾಚಾರ್ಯರ ತತ್ವಗಳು ಐಕ್ಯತೆ ಮೂಡಿಸುವಲ್ಲಿ ಸಹಕಾರಿ: ಅಪರ ಜಿಲ್ಲಾಧಿಕಾರಿ ವೀಣಾ

ಉಡುಪಿ: ಸನಾತನ ಹಿಂದೂ ಧರ್ಮದ ಉಳಿವು ಮತ್ತು ಬೆಳವಣಿಗೆಗೆ ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರಲ್ಲಿ ಭಕ್ತಿಯ ಭಾವನೆ ತುಂಬುವುದರ ಮೂಲಕ ಹಾಗೂ ದೇವಾಲಯಗಳ ಸ್ಥಾಪನೆ ಮೂಲಕ ಹಿಂದೂ ಧರ್ಮದ ಬೆಳವಣಿಗೆಗೆ ಕೊಡುಗೆ ನೀಡಿದ್ದ ಶಂಕರಾಚಾರ್ಯರು, ದೇಶದಾದ್ಯಂತ […]
ಮಲ್ಪೆಯಲ್ಲಿ ರಾಜ್ಯದ ಪ್ರಪ್ರಥಮ ತೇಲುವ ಸೇತುವೆ ಉದ್ಘಾಟನೆ

ಉಡುಪಿ: ಸಮುದ್ರದಲ್ಲಿ ತೇಲುವ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಯನ್ನು ಮಲ್ಪೆ ಬೀಚ್ ನಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಶುಕ್ರವಾರದಂದು ಉದ್ಘಾಟಿಸಿದರು. ಮಲ್ಪೆ ಸಮುದ್ರ ತೀರವು ಈಗಾಗಲೇ ದೇಶ ವಿದೇಶದ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ಪ್ರಸ್ತುತ ನಿರ್ಮಾಣಗೊಂಡಿರುವ ಸಮುದ್ರದಲ್ಲಿ ತೇಲುವ ಸೇತುವೆಯು ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲಿದೆ. ಪ್ರವಾಸಿಗರನ್ನು ಆಕರ್ಷಿಸುವುದು ಮಾತ್ರವಲ್ಲದೇ, ಭದ್ರತೆಯನ್ನು ಒದಗಿಸುವುದು ಕೂಡಾ ನಮ್ಮ ಕರ್ತವ್ಯವಾಗಿದ್ದು, ಫ್ಲೋಟಿಂಗ್ ಬ್ರಿಡ್ಜ್ ಯೋಜನೆಯ ಆರಂಭದಲ್ಲೇ 20 ರಿಂದ 25 ಲೈಫ್ ಗಾರ್ಡ್ಗಳ ನೇಮಕ ಮಾಡಲಾಗುವುದು ಎಂದು ಹೇಳಿದರು. […]