ಮೇ.16-28 ರ ವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಮಗ್ರ ಕೃಷಿ ಅಭಿಯಾನ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮವು ಮೇ 16 ರಿಂದ 28 ರ ವರೆಗೆ ಉಡುಪಿ ತಾಲೂಕಿನ ಎಲ್ಲಾ ಹೋಬಳಿಗಳ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ, ಕೃಷಿ ಹಾಗೂ ಬೇಸಾಯ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ರೈತರಿಗೆ ಉತ್ಪಾದಕತೆ ಹೆಚ್ಚಿಸುವ ತಾಂತ್ರಿಕತೆಗಳ ಮನವರಿಕೆ ಹಾಗೂ ವಿಜ್ಞಾನಿಗಳೊಂದಿಗೆ ರೈತರ ಸಂವಾದ […]
ಉಸ್ತುವಾರಿ ಸಚಿವರು ಸಾರ್ವಜನಿಕರ ಭೇಟಿಗೆ ಲಭ್ಯ
ಉಡುಪಿ: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮೇ 9 ರಂದು ಬೆಳಗ್ಗೆ 11 ರಿಂದ ಮಣಿಪಾಲ ರಜತಾದ್ರಿಯ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಉಮೇಶ್ ಕತ್ತಿ
ಉಡುಪಿ: ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ವಿವಿಧ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರ್ಕಾರವು ಪ್ರಸ್ತುತ ಬಗೆಹರಿಸಿದ್ದು, 6.60 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರತುಪಡಿಸಿ, ಸರ್ಕಾರಿ ಆದೇಶ ಹೊರಡಿಸಿದೆ ಎಂದು ರಾಜ್ಯದ ಅರಣ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬ್ರಹ್ಮಾವರದ ನೀಲಾವರದಲ್ಲಿ ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ […]
ಶ್ರೀಉತ್ತರಾದಿ ಮಠಾಧೀಶರಿಂದ ಶ್ರೀಕೃಷ್ಣಮಠದ ಭೇಟಿ
ಉಡುಪಿ: ಶ್ರೀಕೃಷ್ಣಮಠಕ್ಕೆ ಶ್ರೀಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಆಗಮಿಸಿ ಭೇಟಿ ನೀಡಿದರು. ಅವರನ್ನು ಸಂಸ್ಕೃತ ಕಾಲೇಜಿನ ಬಳಿಯಿಂದ ಬಿರುದಾವಳಿ, ವಾದ್ಯ-ವೇದಘೋಷದೊಂದಿಗೆ ಸ್ವಾಗತಿಸಲಾಯಿತು. ಶ್ರೀಕೃಷ್ಣಮಠದ ಹೆಬ್ಬಾಗಿಲಿನಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿ ಗಂಧಾದ್ಯುಪಚಾರಗಳೊಂದಿಗೆ ಗೌರವಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಮಾಲಿಕೆ ಮಂಗಳಾರತಿ ನಡೆಸಿದರು.
ಸಾಲಿಗ್ರಾಮದಲ್ಲಿ ಸ್ಕೂಟರ್ ಗೆ ಬಸ್ ಢಿಕ್ಕಿ; ಸವಾರ ಸಾವು
ಕುಂದಾಪುರ: ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಾಲಿಗ್ರಾಮ ಆಂಜನೇಯ ದೇವಸ್ಥಾನದ ತಿರುವಿನ ಬಳಿ ನಡೆದಿದೆ. ಮೃತರನ್ನು ಬನ್ನಾಡಿ ಗ್ರಾಮದ ಬಡಾಬೆಟ್ಟು ಉಪ್ಲಾಡಿ ನಿವಾಸಿ 56 ವರ್ಷದ ಶೀನ ಪೂಜಾರಿ ಎಂದು ಗುರುತಿಸಲಾಗಿದೆ. ಮೇ 6ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರ ಸ್ಕೂಟರ್ಗೆ ಉಡುಪಿ ಕಡೆಯಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶೀನ ಪೂಜಾರಿ, […]