ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ
ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು. ಸರಕಾರದ […]
ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ 3 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಒಂದು ವಾರದ ಒಳಗೆ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ದೇವದಾಸಿ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗುರುತಿಸಲ್ಪಟ್ಟ ಪರಿಶಿಷ್ಟ ಜಾತಿಯ ದೇವದಾಸಿಯರ ಗಂಡು ಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗಿಯನ್ನು ವಿವಾಹವಾದಲ್ಲಿ 3 ಲಕ್ಷ ರೂ. ಹಾಗೂ ಹೆಣ್ಣುಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗನನ್ನು ವಿವಾಹವಾದಲ್ಲಿ 5 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ www.sw.kar.nic.in […]
ನರ್ಸಿಂಗ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ: ಎನ್ ರವಿಕುಮಾರ್
ಉಡುಪಿ: ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸುವುದು ಅವಶ್ಯ ಎಂದು ವಿಶೇಷ ಜಂಟಿ ಸದನ ಸಮಿತಿ, ಉಪ ಸಮಿತಿಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್ನಲ್ಲಿ ನಡೆದ ನರ್ಸಿಂಗ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ನರ್ಸಿಂಗ್ ಮತ್ತು ಅಲೈಡ್ […]
ಸರಕಾರದ ನೌಕರರು ತಂಡವಾಗಿ ಕೆಲಸ ನಿರ್ವಹಿಸಿದಾಗ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯ: ಡಾ. ನವೀನ್ ಭಟ್
ಉಡುಪಿ: ಸರಕಾರದ ಯೋಜನೆ, ಕಾರ್ಯಕ್ರಮಗಳು ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಂದು ತಂಡವಾಗಿ ಕೂಡಿ ಕೆಲಸ ಮಾಡಿದಾಗ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯ ಎಂದು ನಿಕಟಪೂರ್ವ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ. ನವೀನ್ ಭಟ್ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಿ ಕೆಲಸಗಳಲ್ಲಿ ವರ್ಗಾವಣೆ ಎಂಬುವುದು ಸಹಜ. ಕಳೆದ ಒಂದೂವರೆ ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಜಿಲ್ಲೆಯ […]